- 33 ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಈ ನಡುವೆ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೂ ಮುನ್ನವೆ ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕಗೊಳಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮೊದಲ ಹಂತದ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಕಟೀಲ್ ಭೇಟಿಯಾಗಿ ಚರ್ಚೆ ನಡೆಸಿದ ಬೆನ್ನಲ್ಲೆ ಮುಖ್ಯಮಂತ್ರಿ ಯಡಿಯೂರಪ್ಪ 33 ನಿಗಮ ಮಂಡಳಿಗಳಿಗೆ ಅಧ್ಯಕ್ಷರು, 2 ಆಯೋಗಕ್ಕೆ ಹಾಗೂ 2 ಪ್ರಾಧಿಕಾರಗಳಿಗೆ ನೇಮಕ ಅಧ್ಯಕ್ಷರನ್ನು ನೇಮಕ ಗೊಳಿಸಿದ್ದಾರೆ.
ಇಬ್ಬರು ಹಾಲಿ ಶಾಸಕರಿಗೆ ಅಧ್ಯಕ್ಷಗಿರಿ ನೀಡಲಾಗಿದ್ದು, ಇನ್ನುಳಿದಂತೆ ಮಾಜಿ ಶಾಸಕರು, ಪಕ್ಷದ ಮುಖಂಡರು ಸೇರಿದ್ದಾರೆ. ಕೆಲ ತಿಂಗಳುಗಳ ಹಿಂದೆ ಕೇವಲ ಶಾಸಕರಿಗೆ ಮಾತ್ರ ನಿಗಮ ಮಂಡಳಿಗಳ ಅಧ್ಯಕ್ಷಗಿರಿ ನೀಡಲಾಗಿತ್ತು. ಮುಂದಿನ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಸಂಪುಟ ಸುಸ್ತು ಕೊಂಚ ಕಡಿಮೆಯಾದಂತಾಗಿದೆ. ಆದರೂ ಸಚಿವಗಿರಿ ರೇಸ್ ಹೆಚ್ಚಾಗಿದ್ದು, ಅಸಮಾಧಾನ ಸ್ಫೋಟಿಸುವ ಸಾಧ್ಯತೆಗಳಿವೆ.