ಕರುನಾಡಲ್ಲಿ ರಾಹುಲ್ ಜೋಡೋ ಯಾತ್ರೆ..!
- ಶುಕ್ರವಾರ ಕರ್ನಾಟಕಕ್ಕೆ ಎಂಟ್ರಿ: 21 ದಿನ ಯಾತ್ರೆ
- ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲಾ ನಾಯಕರು ಸಜ್ಜು
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸ್ತಿರುವ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗಿನ ಭಾರತ ಜೋಡೋ ಯಾತ್ರೆ, ಶುಕ್ರವಾರ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಶುಕ್ರವಾರದಿಂದ 21 ದಿನ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಾಯಕರು ಸಿದ್ಧತೆ ನಡೆಸಿದ್ದಾರೆ.
ಸೆಪ್ಟೆಂಬರ್ 8ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಈ ಭಾರತ್ ಜೋಡೋ ಯಾತ್ರೆಯನ್ನು ರಾಹುಲ್ ಗಾಂಧಿ ಆರಂಭಿಸಿದ್ರು. ಗುರುವಾರ ಈ ಭಾರತ್ ಜೋಡೋ ಯಾತ್ರೆ 22 ನೇ ದಿನಕ್ಕೆ ಕಾಲಿಟ್ಟಿದೆ.
ತಮಿಳುನಾಡು ಮುಗಿಸಿ ಕೇರಳದಲ್ಲಿ ಯಾತ್ರೆ ಮಾಡಿದ್ದ ರಾಹುಲ್ ಗಾಂಧಿ ಶುಕ್ರವಾರ ಗುಂಡ್ಲುಪೇಟೆಯಿಂದ ಕರ್ನಾಟಕಕ್ಕೆ ಕಾಲಿಡಲಿದ್ದಾರೆ.
ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವೈನಾಡುವಿನಿಂದ ಕರ್ನಾಟಕದ ಗಡಿ ಭಾಗ ಗುಂಡ್ಲುಪೇಟೆ ತಲುಪುವ ಭಾರತ್ ಜೋಡೋ ಯಾತ್ರೆ ರಾಜ್ಯದ 8 ಜಿಲ್ಲೆಗಳಲ್ಲಿ 21 ದಿನಗಳ ಕಾಲ, 510 ಕಿಮೀ ಪಾದಯಾತ್ರೆ ನಡೆಸಲಿದೆ. ಚಾಮರಾಜ ನಗರ, ಮೈಸೂರು ನಗರ, ಗ್ರಾಮಾಂತರ, ಮಂಡ್ಯ ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ ಕ್ರಮಿಸಲಿದೆ. ರಾಹುಲ್ ಗಾಂಧಿಯಾತ್ರೆ ಭಾರತ್ ಜೋಡೋ ಯಾತ್ರೆ ಅಂತಾ ಹೆಸರಿದ್ರೂ, ಕರ್ನಾಟಕದಲ್ಲಿ ಕನ್ನಡಕ್ಕೆ ಅನುಗುಣವಾಗಿ ಇದನ್ನು ಭಾರತದ ಐಕ್ಯತಾ ಯಾತ್ರೆ ಅಂತಾ ಹೆಸರಿಟ್ಟುಕೊಳ್ಳಲಾಗಿದೆ.