18 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಎಂದ ಸಮೀಕ್ಷೆ..!
– ಬಿಜೆಪಿ-ಜೆಡಿಎಸ್ ಮೈತ್ರಿ ವರ್ಕ್ ಆಗುತ್ತಾ?
– ಸಮೀಕ್ಷೆ ಪ್ರಕಾರ ಗೆಲ್ಲುವ ಸೀಟು ಎಷ್ಟು?
NAMMUR EXPRESS NEWS
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮತ್ತೊಂದು ಸಮೀಕ್ಷೆ ಆಘಾತ ನೀಡಿದೆ. ಕಾಂಗ್ರೆಸ್ ಕಡೆ ಜನರ ಒಲವು ಇದ್ದು, ವಿಧಾನಸಭಾ ಚುನಾವಣೆ ಬಳಿಕ ಮತ್ತೊಮ್ಮೆ ಮುಖಭಂಗವಾಗುತ್ತಾ ಎನ್ನುವ ಪ್ರಶ್ನೆ ಎದುರಾಗಿದೆ. ಪೋಲ್ ಟ್ಯ್ರಾಕರ್ ಎನ್ನುವ ಸಂಸ್ಥೆ ಕರ್ನಾಟಕದಲ್ಲಿ ನಡೆಸಿರುವ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್ಗೆ ಬರೋಬ್ಬರಿ 18 ಕ್ಷೇತ್ರಗಳಲ್ಲಿ ಗೆಲುವಿನ ಮಾಲೆ ಸಿಗಲಿದೆ ಎಂದು ಹೇಳಿದೆ. ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿರುವ ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದ್ದು, ಜೆಡಿಎಸ್ ಒಂದು ಕ್ಷೇತ್ರದಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ವರದಿ ಹೇಳಿದೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಕೂಡ ಇದೆ ಎಂದು ಅಚ್ಚರಿಯ ವರದಿ ನೀಡಿದೆ.
ಸಮೀಕ್ಷೆ ಪ್ರಕಾರ ಗೆಲ್ಲುವ ಸೀಟುಗಳು
ಕಾಂಗ್ರೆಸ್ – 18
ಬಿಜೆಪಿ – 8
ಜೆಡಿಎಸ್ – 01
ಇತರೆ – 01
ಬಿಜೆಪಿಗೆ ಶಾಕ್ ಕೊಟ್ಟ ಸಮೀಕ್ಷೆ!
2019ರ ಚುನಾವಣೆಯಲ್ಲಿ ಬರೋಬ್ಬರಿ 26 ಕ್ಷೇತ್ರಗಳಲ್ಲಿ ಗೆದ್ದಿದ್ದ ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಧೂಳಿಪಟ ಮಾಡಿತ್ತು. ಕಾಂಗ್ರೆಸ್ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದ್ದರೆ, ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದಿದ್ದರೆ, ಮೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. ಕಳೆದ ಬಾರಿಯಷ್ಟೇ ಸ್ಥಾನಗಳನ್ನು ಗೆದ್ದರೂ ಸಾಕು ಎನ್ನುವ ಲೆಕ್ಕಾಚಾರ ಇದ್ದರೂ, ಚುನಾವಣಾ ಪೂರ್ವ ಸಮೀಕ್ಷೆಗಳು ಬೇರೆಯದೇ ಕಥೆ ಹೇಳುತ್ತಿವೆ.
ಅಧಿಕಾರಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ರಾಮೀಣ ಭಾಗದ ಮಹಿಳೆಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಚಿತ ಬಸ್ ಸೇವೆ, ಗೃಹಲಕ್ಷ್ಮಿ ಯೋಜನೆ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿದೆ. ಸದ್ಯ ಕರ್ನಾಟಕದಲ್ಲಿ ಚುನಾವಣಾ ಕಣ ರಂಗೇರಿದೆ, ರಾಹುಲ್ ಗಾಂಧಿ, ನರೇಂದ್ರ ಮೋದಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ಗೆ ಈ ಚುನಾವಣೆ ಪ್ರತಿಷ್ಠೆಯ ವಿಚಾರವಾಗಿದ್ದು, ಶತಾಯ ಗತಾಯ ಗೆಲ್ಲಲು ಪ್ರಯತ್ನ ಮಾಡುತ್ತಿದೆ. ಮತ್ತೊಂದೆಡೆ ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಪುಟಿದೇಳಲು ಬಿಜೆಪಿ ಪ್ರಯತ್ನಿಸುತ್ತಿದೆ.