Categories
ತೀರ್ಥಹಳ್ಳಿ ರಾಜಕೀಯ

ತೀರ್ಥಹಳ್ಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಕೃತಜ್ಞತೆ!

ತೀರ್ಥಹಳ್ಳಿಯಲ್ಲಿ ಬಿಜೆಪಿಯಿಂದ ಮತದಾರರಿಗೆ ಕೃತಜ್ಞತೆ!

– ಲೋಕ ಸಭೆ, ಪರಿಷತ್ ಚುನಾವಣೆಯಲ್ಲಿ ಗೆಲುವು
– ಗೆದ್ದ ನಾಯಕರಿಗೆ ಅಭಿನಂದನಾ ಸಮಾರಂಭ: ಸರ್ವರಿಗೂ ಸ್ವಾಗತ

NAMMUR EXPRESS NEWS
ತೀರ್ಥಹಳ್ಳಿ: ಇತ್ತೀಚೆಗೆ ನಡೆದ ಲೋಕಸಭಾ ಮತ್ತು ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿದ ಪಕ್ಷದ ಅಭ್ಯರ್ಥಿಗಳಾದ ಸಂಸದ ಶ್ರೀ ಬಿ.ವೈ ರಾಘ ವೇಂದ್ರ ಮತ್ತು ನೂತನ ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಧನಂಜಯ ಸರ್ಜಿ ಮತ್ತು ಶ್ರೀ ಎಸ್.ಎಲ್ ಭೋಜೇಗೌಡ ಇವರಿಗೆ ಜೂನ್ 14 ರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ತೀರ್ಥಹಳ್ಳಿಯ ರಥಬೀದಿ ಶ್ರೀ ವಿದ್ಯಾಧಿರಾಜ ಸಭಾಗೃಹದಲ್ಲಿ ಅಭಿಂದನೆ ಹಾಗೂ ಈ ಜಯಭೇರಿಗೆ ಕಾರಣಕರ್ತರಾದ ಮತದಾರ ಬಂಧುಗಳಿಗೆ ಮತ್ತು ಗೆಲುವಿಗಾಗಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತಾ ಅರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ವಿಜಯೀ ಅಭ್ಯರ್ಥಿಗಳು ಮತ್ತು ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಟಿ.ಡಿ ಮೇಘರಾಜ್, ರಾಜ್ಯ ಬಿಜೆಪಿ ಪ್ರಮುಖರಾದ ಶ್ರೀ ಎಂ.ಬಿ ಭಾನುಪ್ರಕಾಶ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷ ಶ್ರೀ ಹೆದ್ದೂರು ನವೀನ್ ಮತ್ತು ಇತರರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪಕ್ಷದ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.