- ಸಜ್ಜನ ರಾಜಕಾರಣಿ ಜಯಪ್ರಕಾಶ್ ಹೆಗ್ಡೆಗೆ ಸ್ಥಾನ
ಬೆಂಗಳೂರು: ಸರಳ, ಸಜ್ಜನ ರಾಜಕಾರಣಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ರಾಜ್ಯಪಾಲರ ಆದೇಶಾನುಸಾರ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಧಿಕಾರ ಇರಲಿ, ಬಿಡಲಿ ಜನರು, ನಂಬಿದವರ ಜತೆ ಸದಾ ಇರುವ ನಾಯಕ ಎಂದೇ ಕರಾವಳಿ ಭಾಗದಲ್ಲಿ ಹೆಸರು ಪಡೆದಿರುವ ಹೆಗ್ಡೆ ಅವರಿಗೆ ಹುದ್ದೆ ಸಿಕ್ಕಿರುವುದು ಅವರ ಅಭಿಮಾನಿ ವಲಯದಲ್ಲಿ ಸಂತಸ ತಂದಿದೆ.
ಜಯಪ್ರಕಾಶ್ ಹೆಗ್ಡೆ ಅವರು ಜೆ.ಎಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕಾಂಗ್ರೆಸ್ ಸೇರಿದ್ದರು. ಒಂದು ಅವಧಿಗೆ ಉಡುಪಿ – ಚಿಕ್ಕಮಗಳೂರು ಸಂಸದರಾಗಿಯೂ ಆಯ್ಕೆಯಾಗಿದ್ದ ಜಯಪ್ರಕಾಶ್ ಹೆಗ್ಡೆ ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಳಿಕ ಅವರಿಗೆ ಸ್ಥಾನ ಸಿಕ್ಕಿರಲಿಲ್ಲ.