Categories
ರಾಜಕೀಯ

ಶಿವಮೊಗ್ಗದ ಐವರಿಗೆ ರಾಜ್ಯ ಕಾಂಗ್ರೆಸ್ ಮಹತ್ವದ ಸ್ಥಾನ

  • ಮಂಜುನಾಥ್ ಭಂಡಾರಿ, ಮಧು ಬಂಗಾರಪ್ಪ, ಕಲಗೋಡು ರತ್ನಾಕರ್, ಶಿವಕುಮಾರ್, ರಾಜನಂದಿನಿಗೆ ಹುದ್ದೆ

NAMMUR EXPRESS NEWS
ಶಿವಮೊಗ್ಗ: ಕೆಪಿಸಿಸಿ ಪ್ರಕಟಿಸಿದ ಪದಾಧಿಕಾರಿಗಳ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಐವರು ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ನೂತನ ಉಪಾಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕಗೊಂಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳಾಗಿ ಮಾಜಿ ಜಿ.ಪಂ ಸದಸ್ಯ ಕಲಗೋಡು ರತ್ನಾಕರ್,ನಿವೃತ್ತ ಪೊಲೀಸ್ ಅಧಿಕಾರಿ ಪಿ.ಓ ಶಿವಕುಮಾರ್, ಕಾಗೋಡು ರಾಜನಂದಿನಿ ನೇಮಕಗೊಂಡಿದ್ದಾರೆ.
ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಭದ್ರಾವತಿ ಶಾಸಕ ಬಿ.ಕೆ ಸ೦ಗಮೇಶ್, ರಾಜ್ಯ ಕಾಂಗ್ರೆಸ್ ಮುಖಂಡರಾದ ಕಿಮ್ಮನೆ ರತ್ನಾಕರ್, ಡಾ.ಆರ್‌.ಎಂ ಮಂಜುನಾಥ ಗೌಡ, ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷ ರಮೇಶ್ ಇಕ್ಕೇರಿ,ಭದ್ರಾವತಿ ಗ್ರಾಮಾಂತರ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಮೇಶ್ ಶಂಕರಘಟ್ಟ ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಜಿ.ಡಿ ಮಂಜುನಾಥ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.