- ಕಾಂಗ್ರೆಸ್ ನ 6 ಮುಖಂಡರ ಖಾತೆ ಲಾಕ್
- ಟ್ವಿಟರ್ ನಿಯಮ ಉಲ್ಲಂಘಿಸಿದ್ದಕ್ಕೆ ಕ್ರಮ
- ಕೇಂದ್ರದ ಅಣತಿಯಂತೆ ಕ್ರಮ; ಕಾಂಗ್ರೆಸ್ ಕಿಡಿ
NAMMUR EXPRESS
ನವದೆಹಲಿ: ಟ್ವಿಟರ್ ನಿಯಮ ಪಾಲಿಸದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ 6 ಮುಖಂಡರ ಟ್ವಿಟರ್ ಖಾತೆಯನ್ನು ಟ್ವಿಟ್ಟರ್ ಲಾಕ್ ಮಾಡಿದೆ. ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಸೇರಿದಂತೆ ಐದು ಹಿರಿಯ ನಾಯಕರ ಹ್ಯಾಂಡಲ್ ಗಳ ವಿರುದ್ಧ ಇದೇ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಅಜಯ್ ಮಾಕೆನ್, ಲೋಕಸಭೆಯಲ್ಲಿ ಪಕ್ಷದ ವಿಪ್ ಮಾಣಿಕ್ ಕಮ್ ಠಾಗೋರ್, ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆ ಲಾಕ್ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಟ್ವಿಟರ್ ಈ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಕಳೆದ ವಾರ ದೆಹಲಿಯಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಒಂಬತ್ತು ವರ್ಷದ ಸಂತ್ರಸ್ತೆಯ ಕುಟುಂಬದೊಂದಿಗೆ ತಗೆದ ಚಿತ್ರಗಳನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ ಸಿಪಿಸಿಆರ್) ಗಾಂಧಿ ಅವರ ಟ್ವೀಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಪರಾಧ ಕೃತ್ಯದಲ್ಲಿ ಬಲಿಪಶುವಾದ ಅಪ್ರಾಪ್ತ ವಯಸ್ಕರ ಗೌಪ್ಯತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕನ ಖಾತೆಯನ್ನು ಲಾಕ್ ಮಾಡುವಂತೆ ಟ್ವಿಟರ್ ಗೆ ನಿರ್ದೇಶನ ನೀಡಿತ್ತು. ರಾಜ್ಯದ, ಮಲೆನಾಡಿನ ಎಲ್ಲಾ ಸುದ್ದಿಗಳಿಗೆ NAMMUR EXPRESS ” ಫೇಸ್ಬುಕ್ ಮತ್ತು ಯೂಟ್ಯೂಬ್ ಚಾನೆಲ್ ಲೈಕ್ ಮಾಡಿ , ಸಬ್ಸೈಬ್ ಆಗಿ , ವಾಟ್ಸಾಪ್ನಲ್ಲಿ ಎಲ್ಲಾ ನಿಮ್ಮ ಊರಿನ ಸುದ್ದಿ ಪಡೆಯಲು 9481949101ಗೆ ನಿಮ್ಮ ಹೆಸರು , ಊರು , ತಾಲೂಕು ವಾಟ್ಸಾಪ್ ಮಾಡಿರಿ. ನಿಮ್ಮ ಎಲ್ಲಾ ಸ್ನೇಹಿತರು ಹಾಗೂ ಗ್ರೂಪ್ ಗಳಿಗೆ ಶೇರ್ ಮಾಡಿರಿ. ಧನ್ಯವಾದಗಳು.