- ಟ್ವೀಟ್ ಮಾಡಿರುವ ಪ್ರಧಾನಿ ಮೋದಿ
- ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ ಎಂದ ಪ್ರಧಾನಿ
ನವದೆಹಲಿ: ಇಂದು ದೇಶದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಚುನಾವಣಾ ಆಯೋಗದ ಸ್ಥಾಪನಾ ದಿನವನ್ನು ಗುರುತಿಸಲು ಜನವರಿ 25ನ್ನು ‘ರಾಷ್ಟ್ರೀಯ ಮತದಾರರ ದಿನ’ ಎಂದು ಆಚರಿಸಲಾಗುತ್ತದೆ. ಇಂದು ಚುನಾವಣಾ ಆಯೋಗವು ನೀಡಿದ ಮಹತ್ವದ ಕೊಡುಗೆಯನ್ನು ಸ್ಮರಿಸುವ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ರಾಷ್ಟ್ರೀಯ ಮತದಾರರ ದಿನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಚುನಾವಣೆಗಳನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು ನೀಡಿದ ಅದ್ಭುತ ಕೊಡುಗೆಯನ್ನು ಶ್ಲಾಘಿಸುವ ಸಂದರ್ಭವಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದು, ಈ ದಿನವೂ ಮತದಾರರ ನೋಂದಣಿಯನ್ನು ಖಾತರಿಪಡಿಸುವ ಅಗತ್ಯತೆಯ ಬಗ್ಗೆ, ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
Related Posts
Add A Comment