Categories
ಶಿವಮೊಗ್ಗ

ಶಿವಮೊಗ್ಗದಿಂದ ಆ.11ಕ್ಕೆ ವಿಮಾನ ಹಾರುತ್ತೆ

– ಬೆಂಗಳೂರು-ಶಿವಮೊಗ್ಗ ವಿಮಾನ ಹಾರಾಟ
– ವಿಮಾನ ಹಾರಾಟದ ಸಮಯ ಏನೇನು?
– ಬೆಂಗಳೂರು ಶಿವಮೊಗ್ಗಕ್ಕೆ ಟಿಕೆಟ್ ಹಣ ಎಷ್ಟು?

NAMMUR EXPRESS NEWS
ಶಿವಮೊಗ್ಗ: ಮಲೆನಾಡು ಜನರಿಗೆ ಸಿಹಿ ಸುದ್ದಿ..!. ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಮುಹೂರ್ತ ನಿಗದಿಯಾಗಿದೆ.
ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಆದರೆ ಇಲ್ಲಿಯ ತನಕ ಪ್ರಯಾಣಿಕ ವಿಮಾನಗಳ ಸಂಚಾರ ಆರಂಭವಾಗಿರಲಿಲ್ಲ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಡೆಯಲಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಇಂಡಿಗೋ ಸಂಸ್ಥೆಯ ವಿಮಾನ ಹಾರಾಟ ಆರಂಭಿಸಲಿದೆ. ಕೆಲವೇ ದಿನಗಳಲ್ಲಿ ಬುಕ್ಕಿಂಗ್ ಸಹ ಆರಂಭವಾಗಲಿದೆ.
ಆಗಸ್ಟ್ 11ರಂದು ಶಿವಮೊಗ್ಗದ ಸೊಗಾನ ವಿಮಾನ ನಿಲ್ದಾಣದಿಂದ ಸಂಸ್ಥೆಯ ಮೊದಲ ವಿಮಾನ ಬೆಂಗಳೂರಿಗೆ ಹಾರಾಟ ನಡೆಸಲಿದೆ ಎಂದು ಹೇಳಿದ್ದಾರೆ.

ಪ್ರತಿ ದಿನ ಹೊರಡುವ ಸಮಯ ಎಷ್ಟು?

ವಿಮಾನ ಪ್ರತಿ ದಿನ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಶಿವಮೊಗ್ಗಕ್ಕೆ 10.30ಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಡುವ ವಿಮಾನ 1.30ಕ್ಕೆ ಬೆಂಗಳೂರು ತಲುಪಲಿದೆ.
ಸದ್ಯ ಇಂಡಿಗೋ ಸಂಸ್ಥೆ ಬೆಂಗಳೂರು-ಶಿವಮೊಗ್ಗ ನಡುವೆ ಒಂದು ವಿಮಾನವನ್ನು ಮಾತ್ರ ಓಡಿಸಲಿದೆ. ಪ್ರಯಾಣಿಕರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.2,500ರಿಂದ 3,500 ರೂ. ಟಿಕೆಟ್ ದರ?

ಬೆಂಗಳೂರು- ಶಿವಮೊಗ್ಗ ಮಾರ್ಗಕ್ಕೆ 2,500ರಿಂದ 3,500 ರೂ. ತನಕ ದರ ಆಗುವ ನಿರೀಕ್ಷೆ ಇದೆ. ಶೀಘ್ರದಲ್ಲೇ ಇಂಡಿಗೋ ವೆಬ್‌ಸೈಟ್ ಮೂಲಕ ಟಿಕೆಟ್ ಬುಕ್ ಕೂಡ ಮಾಡಬಹುದಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.