ಶಿವಮೊಗ್ಗ ಬರ ಪೀಡಿತ ಜಿಲ್ಲೆ ಘೋಷಣೆ
– ಗೃಹ ಲಕ್ಷ್ಮಿ ಯೋಜನೆ ಚಾಲನೆ ಬಳಿಕ ಸಚಿವ ಮಧು ಬಂಗಾರಪ್ಪ ಹೇಳಿಕೆ
NAMMUR EXPRESS NEWS
ಶಿವಮೊಗ್ಗ: ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ.ಬರಗಾಲ ಎಂದೂ ಸರ್ಕಾರ ಇನ್ನೂ ಘೋಷಣೆ ಮಾಡಿಲ್ಲ.ಕೇಂದ್ರ ಸರ್ಕಾರದ ನಿಯಮಾವಳಿಯಲ್ಲಿ ಒಂದಷ್ಟು ಬದಲಾವಣೆ ಆಗಬೇಕು. ಎಲ್ಲವನ್ನೂ ಪರಿಶೀಲಿಸಿ, ಸರ್ಕಾರ ನಿರ್ಧಾರ ಮಾಡುತ್ತದೆ. ಶಿವಮೊಗ್ಗ ಜಿಲ್ಲೆಯನ್ನು ಬರ ಪೀಡಿತ ಘೋಷಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇತಿಹಾಸ ಪುಟಕ್ಕೆ ಸೇರುವ ಯೋಜನೆಯನ್ನು ನಮ್ಮ ಸರ್ಕಾರ ಕೊಡುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಸಿಎಂ, ಡಿಸಿಎಂ ಸೇರಿದಂತೆ ಸರ್ಕಾರ ಜಾರಿಗೊಳಿಸಿದೆ. ಬಡ ಹೆಣ್ಣುಮಕ್ಕಳಿಗೆ ಅಂದ್ರೆ ಮನೆಯೊಡತಿಗೆ 2 ಸಾವಿರ ಕೊಡುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ.