Categories
ಉದ್ಯೋಗ ಸುದ್ದಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ

ಶಿವಮೊಗ್ಗ ಜಿಲ್ಲೆ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ
-14 ಗ್ರಾಮ ಪಂಚಾಯಿತಿಯಲ್ಲಿ ಭರ್ತಿಗೆ ಅವಕಾಶ
– ಅರ್ಜಿ ಸಲ್ಲಿಸಲು ಫೆ.23 ಕೊನೆಯ ದಿನ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿ ಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‍ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾತಿಯನ್ವಯ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆ.23 ಕೊನೆಯ ದಿನ. ಅರ್ಜಿಯನ್ನು ಸಂಬಂಧಿಸಿದ 14 ಗ್ರಾಮ ಪಂಚಾಯಿತಿ ಮತ್ತು ವೆಬ್‍ಸೈಟ್ https://shimoga.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆ ಸಹಿತ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗೆ ಸಲ್ಲಿಸಬೇಕು ಎಂದು ಗ್ರಾಮ ಪಂಚಾಯಿತಿ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಯನ್ನು ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.