ಭದ್ರಾವತಿ ಉಕ್ಕಿನ ಕಾರ್ಖಾನೆ ಪುನರಾರಂಭಕ್ಕೆ ಅಸ್ತು!
– ಆ.10ರಿಂದ ವಿ.ಐ.ಎಸ್.ಎಲ್ ಕಾರ್ಖಾನೆ ಆರಂಭ
– ಭದ್ರಾವತಿ ಜನ, ಉದ್ಯೋಗಿಗಳಿಗೆ ಗುಡ್ ನ್ಯೂಸ್!
NAMMUR EXPRESS NEWS
ಶಿವಮೊಗ್ಗ: ( Shivamogga ) ಭದ್ರಾವತಿಯಲ್ಲಿರುವ ವಿ.ಐ.ಎಸ್.ಎಲ್, ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತೀಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸ್ಪಷ್ಟ ನಿರ್ದೇಶನದೊಂದಿಗೆ, ಸೈಲ್ ಆಡಳಿತ ಮಂಡಳಿಯು ಭದ್ರಾವತಿ ವಿಐಎಸ್ಎಲ್ ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿರುವುದನ್ನು ತಿಳಿಸಲು ನನಗೆ ಅತ್ಯಂತ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.
ಅದರನ್ವಯ ಬಾರ್ಮಿಲ್ ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ ಎಂದು ಹೇಳಿದ್ದಾರೆ. ವಿಐಎಸ್ಎಲ್ ಅನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂಬುದಾಗಿ ಭಾವಿಸಿದ್ದೇನೆ, ಕೇಂದ್ರ ಸರ್ಕಾರದ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು ಸೈಲ್ ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ : ಕಾಳುಮೆಣಸು ಬೆಳೆಗಾರರಿಗೆ ಬಂಪರ್!
HOW TO APPLY : NEET-UG COUNSELLING 2023