Categories
ಶಿವಮೊಗ್ಗ

ಭಾರತ್ ಜೋಡೋಗೆ 1 ವರ್ಷ: ಶಿವಮೊಗ್ಗದಲ್ಲಿ ಕಾರ್ಯಕ್ರಮ!

ಭಾರತ್ ಜೋಡೋಗೆ 1 ವರ್ಷ: ಶಿವಮೊಗ್ಗದಲ್ಲಿ ಕಾರ್ಯಕ್ರಮ!
– ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಭಾಗಿ
– ಇಂದು ಸಂಜೆ ಕಾರ್ಯಕ್ರಮಕ್ಕೆ ಸರ್ವರಿಗೂ ಆಹ್ವಾನ

NAMMUR EXPRESS NEWS
ಶಿವಮೊಗ್ಗ: ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಸೆ.7ರ ಸಂಜೆ 5 ಗಂಟೆಗೆ ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಜಿಲ್ಲಾ ಮಟ್ಟದ ಭಾರತ್ ಜೋಡೋ ಯಾತ್ರೆ ಆಚರಣೆ ಕಾರ್ಯಕ್ರಮ ಕಾಂಗ್ರೆಸ್‌ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ತಿಳಿಸಿದ್ದಾರೆ. ಎಐಸಿಸಿ ವರಿಷ್ಠ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ನಡೆದಿತ್ತು. ಇದರ ಸ್ಮರಣೆಗಾಗಿ ಬಿ.ಹೆಚ್. ರಸ್ತೆಯ ಶಿವಪ್ಪ ನಾಯಕ ಪ್ರತಿಮೆಯ ಎದುರಿನಿಂದ ಯಾತ್ರೆ ಆರಂಭವಾಗಿ ಎಎ ಸರ್ಕಲ್‌, ನೆಹರು ರಸ್ತೆ, ಸೀನಪ್ಪಶ್ರೇಷ್ಠಿ ವೃತ್ತಕ್ಕೆ ಸಾಗಿ ಅಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ್, ಶಾಸಕರಾದ ಬಿ.ಕೆ. ಸಂಗಮೇಶ್, ಗೋಪಾಲಕೃಷ್ಣ ಬೇಳೂರು, ಮಾಜಿ ಶಾಸಕರಾದ ಆರ್. ಪ್ರಸನ್ನಕುಮಾರ್,ಹೆಚ್.ಎಂ. ಚಂದ್ರಶೇಖರಪ್ಪ, ಆಯನೂರು ಮಂಜುನಾಥ್, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್, ಪ್ರಮುಖರಾದ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ, ಹೆಚ್.ಸಿ. ಯೋಗೇಶ್‌, ಡಾ. ಶ್ರೀನಿವಾಸ ಕರಿಯಣ್ಣ ಇಸ್ಮಾಯಿಲ್ ಖಾನ್, ಕಲಗೋಡು ರತ್ನಾಕರ್, ಪಿ.ಒ. ಶಿವಕುಮಾರ್, ಸೇರಿದಂತೆ ಅನೇಕ ಗಣ್ಯರು, ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಚಂದ್ರಭೂಪಾಲ್ ಕೊರಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.