Categories
ಶಿವಮೊಗ್ಗ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ ಮಂಜುನಾಥ ಗೌಡ ಅರೆಸ್ಟ್!

BREAKING NEWS

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ ಮಂಜುನಾಥ ಗೌಡ ಅರೆಸ್ಟ್!
– ಶಿವಮೊಗ್ಗ, ತೀರ್ಥಹಳ್ಳಿಯ ಹಲವೆಡೆ ಇಡಿ ದಾಳಿ
– ನಕಲಿ ಚಿನ್ನಾಭರಣ ಅಡವಿಟ್ಟು 64 ಕೋಟಿ ರೂ. ಸಾಲ ಪಡೆದ ಪ್ರಕರಣಕ್ಕೆ ಟ್ವಿಸ್ಟ್

NAMMUR EXPRESS NEWS
ಶಿವಮೊಗ್ಗ: ನಕಲಿ ಚಿನ್ನಾಭರಣವನ್ನು ಅಡವಿಟ್ಟು 64 ಕೋಟಿ ರೂ. ಸಾಲ ಪಡೆದ ಪ್ರಕರಣದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ ಮಂಜುನಾಥ ಗೌಡರನ್ನ ಇಡಿ ಬಂಧಿಸಿ 1ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಿಪಡಿಸಿದೆ. ಈ ಘಟನೆ ಭಾರೀ ಕುತೂಹಲ ಮೂಡಿಸಿದೆ.
ನಕಲಿ ಬಂಗಾರ ಅಡಮಾನ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಎರಡನೇ ದಿನವು ಜಿಲ್ಲೆಯ ವಿವಿಧೆಡೆ ದಾಳಿ ಮುಂದುವರೆಸಿದ್ದಾರೆ. ಶಿವಮೊಗ್ಗ, ತೀರ್ಥಹಳ್ಳಿ ಕೆಲವೆಡೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಅಚ್ಚುತರಾವ್‌ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್‌ ನಿರ್ದೇಶಕ ಜಿ.ಎನ್.ಸುಧೀರ್‌ ಅವರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆಯಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಕೃಷ್ಣಮೂರ್ತಿ ಭಟ್‌ ಮನೆ ಮೇಲು ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷ್ಣಮೂರ್ತಿ ಭಟ್‌ ಅವರು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಆಪ್ತರಾಗಿದ್ದಾರೆ. ಇನ್ನೊಂದೆಡೆ ಬೆಂಗಳೂರಿನ ಇ.ಡಿ. ಕಚೇರಿಯಲ್ಲಿ ಆರ್‌.ಎಂ.ಮಂಜುನಾಥ ಗೌಡ ಅವರ ವಿಚಾರಣೆ ಮುಂದುವರೆದಿದೆ. ಇಡಿ ಬಂಧಿಸಿರುವುದಾಗಿ ಮಾಧ್ಯಮಗಳು ಪ್ರಚಾರ ಮಾಡಿವೆ. ಮಂಜುನಾಥ್ ಗೌಡರಿಗೆ ನ್ಯಾಯಾಂಗ ಬಂಧನವಾಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.