Categories
ಶಿವಮೊಗ್ಗ

ಸೆ. 2 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ

ಸೆ. 2 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ
– ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ
– 9ನೇ ತರಗತಿಯ ವಿದ್ಯಾರ್ಥಿನಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

NAMMUR EXPRESS NEWS
ದಿನಾಂಕ 02-09-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ದಸರಾ
ಕ್ರೀಡಾಕೂಟದಲ್ಲಿ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ಕಬ್ಬಡಿ ಆಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ತಂಡದಲ್ಲಿ ಇದೇ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಮಿಥಾಲಿ ಟಿ.ಎಸ್ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಇವರ ಈ ಸಾಧನೆಯನ್ನು ವಾಗ್ದೇವಿ ಸಮೂಹ ಸಂಸ್ಥೆಯ ಅಧ್ಯಕ್ಷರು,ಸದಸ್ಯರ ಉಪನ್ಯಾಸಕವೃಂದ, ಶಿಕ್ಷಕ ವೃಂದ
ಮತ್ತು ಪೋಷಕರು ಅಭಿನಂದಿಸಿ ಮುಂದಿನ ಕ್ರೀಡಾಕೂಟಕ್ಕೆ ಶುಭಹಾರೈಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.