ಶಿವಮೊಗ್ಗದಲ್ಲಿ ಈ ವರ್ಷದ ಮೊದಲ ಕರೋನಾ ಕೇಸ್
* ಹಾವೇರಿ ಜಿಲ್ಲೆಯ 75 ವರ್ಷದ ವೃದ್ಧನಿಗೆ ಕೊರೋನಾ ಪಾಸಿಟಿವ್
* ಹೃದಯ ಸಂಬಂಧಿ ಕಾಯಿಲೆಯಿಂದ ಚಿಕಿತ್ಸೆ ಪಡೆದು ಹೋಗಿದ್ದ ವೃದ್ಧ
NAMMMUR EXPRESS NEWS
ಶಿವಮೊಗ್ಗ: ಹಾವೇರಿ ಜಿಲ್ಲೆಯ 75 ವರ್ಷದ ವೃದ್ಧನಿಗೆ ಕರೋನಾ ಪಾಸಿಟಿವ್ ಬಂದಿದ್ದು, ಈ ವರ್ಷದ ಜಿಲ್ಲೆಯ ಮೊದಲ ಕೇಸ್ ಇದಾಗಿದೆ. ಮೇ. 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಕಳೆದ ಏಳು ದಿನ ಚಿಕಿತ್ಸೆ ಪಡೆದಿದ್ದ, ಕಫ ಇದ್ದ ಕಾರಣ ವೃದ್ಧನನ್ನು ಕೊರೊನಾ ಟೆಸ್ಟ್ ಒಳಪಡಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು, ವೃದ್ಧನಿಗೆ ಕೊರೊನಾ ಪಾಸಿಟಿವ್ ತಗುಲಿರುವುದು ದೃಢಪಟ್ಟಿದೆ.
ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖನಾಗಿ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆ ಸೇರಿದ ಬಳಿಕ ಕೊರೊನಾ ದೃಢಪಟ್ಟಿರುವುದು ಈಗ ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟಪಡಿಸಿರುವ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ, ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದ್ದು, ಹಾವೇರಿ ಜಿಲ್ಲೆಯ ಡಿಎಚ್ ಒ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
