ಸರ್ಕಾರದ ಹುದ್ದೆ ಪಡೆಯುವವರಿಗೆ ಗುಡ್ ನ್ಯೂಸ್!
– ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷ ವಯೋಮಿತಿ ಸಡಿಲಿಕೆ
– ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಅಧಿಕೃತ ಆದೇಶ
NAMMUR EXPRESS NEWS
ಬೆಂಗಳೂರು : ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲಾಗಿದೆ. ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಕ್ರಮವಾಗಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.







