Categories
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ…!!

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆ…!!
– ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ 25-07-2025 ಇಂದು ರಜೆ ಘೋಷಣೆ
– ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ

NAMMUR EXPRESS NEWS
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಜುಲೈ 25, ಶುಕ್ರವಾರ ಇಂದು ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ಇಂದು ಕೂಡ ಮಳೆ ಆಗುವ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ರೀತಿ, ಸಾಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದು ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯವಾಗುತ್ತದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.