ಶಿವಮೊಗ್ಗ ಜಿಲ್ಲೆಯಲ್ಲಿ ರಜೆ ಘೋಷಣೆ ಸಾಧ್ಯತೆ?!
– ಮಲೆನಾಡು ಭಾಗದಲ್ಲಿ ಭಾರಿ ಮಳೆ: ತುಂಬಿ ಹರಿಯುತ್ತಿರುವ ತುಂಗೆ
– ಸಾಗರದ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
– ದಿನವಿಡೀ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತ
NAMMUR EXPRESS NEWS
ಮಲೆನಾಡು: ತೀರ್ಥಹಳ್ಳಿ ಸೇರಿ ಮಲೆನಾಡಿನಲ್ಲಿ ಬಾರಿ ಮಳೆಯಾಗುತ್ತಿದ್ದು, ಮಧ್ಯಾಹ್ನದ ಬಳಿಕ ಎಲ್ಲೆಡೆ ಬಾರಿಮಳೆಯಾಗುತ್ತಿದೆ. ಹಲವೆಡೆ ರಸ್ತೆ ಸಂಚಾರ ಸಮಸ್ಯೆಯಾಗಿದೆ. ಜೊತೆಗೆ ಭಾರಿ ಮಳೆಯಿಂದ ಮನೆಯಿಂದ ಹೊರ ಹೋಗಿದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ತೀರ್ಥಹಳ್ಳಿ, ಸಾಗರ, ಹೊಸ ನಗರ ಭಾಗದಲ್ಲಿ ತುಂಗಾ ನದಿ ಸೇರಿದಂತೆ ಮಾಲತಿ, ಶರಾವತಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಜನತೆ ಆದಷ್ಟು ಜಾಗೃತಯಿಂದ ಇರಬೇಕೆಂದು ಆಡಳಿತ ಮನವಿ ಮಾಡಿದೆ. ಜೊತೆಗೆ ಬಹುತೇಕ ಭಾಗಗಳಲ್ಲಿ ರಸ್ತೆಗಳು ಕುಸಿಯುವ ಅಪಾಯ ಕೂಡ ಇದೆ. ಹೀಗಾಗಿ ಎಚ್ಚರಿಕೆಯಿಂದ ಚಲಿಸಬೇಕಾಗಿದೆ. ಅತಿ ಹೆಚ್ಚು ಮಳೆ ದಾಖಲಾಗುತ್ತಿದ್ದು ಇನ್ನೆರಡು ದಿನಗಳು ಕೂಡ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತೀರ್ಥಹಳ್ಳಿಯಲ್ಲಿ ರಜೆ ಘೋಷಣೆ ಸಾಧ್ಯತೆ
ತೀರ್ಥಹಳ್ಳಿ ತಾಲೂಕಲ್ಲಿ ಸೋಮವಾರ ಭಾರೀ ಮಳೆ ಆಗುತ್ತಿದೆ. ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತೀರ್ಥಹಳ್ಳಿ ತಾಲೂಕಿನ ಶಾಲೆಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ.
ಸಾಗರ ತಾಲೂಕಿನಲ್ಲಿ ರಜೆ ಘೋಷಣೆ
ಸಾಗರ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ತಹಶಿಲ್ದಾರ್ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಘೋಷಿಸಿದ್ದಾರೆ.