ಕಾಂಗ್ರೆಸ್ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹೆಚ್.ಎಸ್ ಸುಂದರೇಶ್
– ಅಭಿನಂದಿಸಿದ ಆರ್ ಎಂಎಂ, ರಾಘವೇಂದ್ರ ಶೆಟ್ಟಿ
– ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆ
NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹೆಚ್ ಎಸ್ ಸುಂದರೇಶ್ ಅವರನ್ನು, ಕಾಂಗ್ರೆಸ್ ನಾಯಕರು ಮತ್ತು ಡಿಸಿಸಿ ಬ್ಯಾಂಕಿನ ಜಿಲ್ಲಾ ಅಧ್ಯಕ್ಷರಾದ ಡಾ.ಆರ್.ಎಮ್ ಮಂಜುನಾಥ್ ಗೌಡ ಮತ್ತು ಕಾಂಗ್ರೆಸ್ ಪಕ್ಷದ ಜನಪ್ರಿಯ ಯುವ ನಾಯಕ ರಾಘವೇಂದ್ರ ಶೆಟ್ಟಿ ( ಕಂಡಿಲ್ ರಾಘು ), ಗುರುವಾರ ಶಿವಮೊಗ್ಗ ನಗರದಲ್ಲಿರುವ ಕಾಂಗ್ರೆಸ್ ಭವನಕ್ಕೆ ತೆರಳಿ, ಅಧ್ಯಕ್ಷರಾಗಿ ಐದು ವರ್ಷ ಯಶಸ್ವಿಯಾಗಿ ಪೂರೈಸಿದ ಹೆಚ್ ಎಸ್ ಸುಂದರೇಶ್ ಅವರನ್ನು ಅಭಿನಂದಿಸಿ, ಶಾಲು ಹೊದಿಸಿ ಗೌರವಿಸಿ ಅಭಿನಂದಿಸಿದರು. ಈಗ ಮತ್ತು ಮಂದೆಯು ನಿಮ್ಮ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢವಾಗಿ ಬೆಳೆಯಲಿ. ಬರಲಿರುವ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ವಿಜಯ ಸಾಧಿಸಲಿ ಎಂದು ಹಾರೈಸಿದರು.
ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹೆಚ್ ಎಸ್ ಸುಂದರೇಶ್ ಅವರು ಕಳೆದ ಐದು ವರ್ಷಗಳಿಂದ ಗ್ರಾಮೀಣ ಮಟ್ಟದಲ್ಲಿ ಪಕ್ಷವನ್ನು ಸದೃಢ ಮಾಡಿಕೊಂಡು ಬಂದಿರುತ್ತಾರೆ. ಕಾರ್ಯಕರ್ತರು ಮತ್ತು ಪಕ್ಷದ ಹಿರಿಯರೊಂದಿಗೆ ಇವರ ಒಡನಾಟ ಉತ್ತಮವಾಗಿದ್ದು ಶಿವಮೊಗ್ಗದ ಹಲವು ಕಡೆ ಪಕ್ಷ ಬಲವರ್ಧನೆಯಾಗಿ ಮರಳಿ ತನ್ನ ಸ್ಥಾನ ಪಡೆಯಲು ಸಹಾಯಕವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿ ಮುಂದೆಯೂ ಅವರ ಸಹಕಾರ ಕೋರಿದ್ದಾರೆ.