ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಿವಮೊಗ್ಗಕ್ಕೆ ಭೇಟಿ..!
– ಜುಲೈ 23ರಂದು ಜಿಲ್ಲಾ ಪ್ರವಾಸ ಆಯೋಜನೆ
– ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮದಲ್ಲಿ ಭಾಗಿ
NAMMUR EXPRESS NEWS
ಶಿವಮೊಗ್ಗ: ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜುಲೈ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮೂರು ಕಡೆ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ಜುಲೈ 23ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಲ್ಲಾಪುರದ ಗುಡ್ಡದಲ್ಲಿರುವ ದೇವಸ್ಥಾನದ ಸಾಭಾಂಗಣದಲ್ಲಿ ಸಭೆ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ದೈವಜ್ಞ ಕಲ್ಯಾಣ ಮಂಟಪ, ಸಂಜೆ 5.30ಕ್ಕೆ ಭದ್ರಾವತಿ ಬಸ್ ನಿಲ್ದಾಣದ ಸಮೀಪ ಇರುವ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಜೊತೆಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮಖರಾದ ದೀಪಕ್ ಸಿಂಗ್, ರಾಮಕೃಷ್ಣ, ತ್ಯಾಗರಾಜ್, ಸಂಗಯ್ಯ, ಗೀತಾ ಸತೀಶ್, ಅಬ್ದುಲ್ ವಾಜಿದ್ ಸೇರಿದಂತೆ ಹಲವರು ಇದ್ದರು.
