ಮಲೆನಾಡಿನ ಹಲವೆಡೆ ಲೋಕಾಯುಕ್ತ ದಾಳಿ!
– ಶಿವಮೊಗ್ಗದ ಶಿಕಾರಿಪುರ ಹಾಗೂ ಹೊಸನಗರದಲ್ಲಿ ಅಧಿಕಾರಗಳ ಮನೆಗಳ ದಿಢೀರ್ ಲೋಕಾಯುಕ್ತ ದಾಳಿ
– ಅಧಿಕಾರಿ ತಂಡಗಳು ಪ್ರತ್ಯೇಕವಾಗಿ ಅನೇಕ ದಾಖಲೆಗಳ ಪರಿಶೀಲನೆ
NAMMUR EXPRESS NEWS
ಶಿವಮೊಗ್ಗ/ ಚಿಕ್ಕಮಗಳೂರು: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಭ್ರಷ್ಟ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಕಡೆ ಅಧಿಕಾರಿಗಳ ಮನೆಗಳ ದಿಢೀರ್ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಶಿವಮೊಗ್ಗ, ಶಿಕಾರಿಪುರ ಹಾಗೂ ಹೊಸನಗರದಲ್ಲಿ
ಲೋಕಾಯುಕ್ತ ದಾಳಿ ನಡೆಸಿದೆ. ಸಾವಯವ ಕೃಷಿ ವಿಭಾಗದ ಸಹ ಸಂಶೋಧನಾ ನಿರ್ದೇಶಕರು, ಸಹ ಸಂಶೋಧನಾ ನಿರ್ದೇಶಕ ಡಾ ಎಸ್.ಪ್ರದೀಪ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಿವಮೊಗ್ಗದ ಪ್ರಿಯಾಂಕ ಲೇಔಟ್ ನಲ್ಲಿರುವ ಡಾ. ಪ್ರದೀಪ್ ಮನೆ ಹಾಗೂ ಶಿಕಾರಿಪುರ ತಾಲೂಕಿನ ಭದ್ರಾಪುರದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹೊಸನಗರದಲ್ಲೂ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಹೆಚ್.ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಎರಡು ತಂಡಗಳು ಲತಾಮಣಿ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.