Categories
ಶಿವಮೊಗ್ಗ

ಮಧು ಬಂಗಾರಪ್ಪ ತವರು ಜಿಲ್ಲೆ ಪ್ರವಾಸ

ಮಧು ಬಂಗಾರಪ್ಪ ತವರು ಜಿಲ್ಲೆ ಪ್ರವಾಸ
– ಜೂ.27ಕ್ಕೆ ಶಿವಮೊಗ್ಗ, ಸೊರಬ, ತೀರ್ಥಹಳ್ಳಿ ಭೇಟಿ
– ಸಾರ್ವಜನಿಕ ಅಹವಾಲು ಸ್ವೀಕಾರ: ಅಧಿಕಾರಿಗಳ ಸಭೆ

NAMMUR EXPRESS NEWS
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜೂ.27ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯ ಜನರ ಅಹವಾಲು ಸ್ವೀಕಾರ ಮಾಡಲಿದ್ದಾರೆ.
ಬೆಳಗ್ಗೆ 4 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 9.30ಕ್ಕೆ ಸೊರಬದ ಆನವಟ್ಟಿ ತಲುಪಲಿದ್ದಾರೆ. ಆನವಟ್ಟಿಯಲ್ಲಿ ಸಚಿವರ ಸ್ಥಳೀಯ ಕಚೇರಿ ಉದ್ಘಾಟನೆ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಸೊರಬ ಪ್ರವಾಸಿ ಮಂದಿರ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಉದ್ಘಾಟನೆ, ಅಹವಾಲು ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 3ಕ್ಕೆ ತೀರ್ಥಹಳ್ಳಿಯ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ. 3.30ಕ್ಕೆ ತಾಲೂಕು ಕಚೇರಿಯಲ್ಲಿ ತಾಲೂಕಿನ ಪ್ರಗತಿ ಸಭೆ ನಡೆಸಲಿದ್ದಾರೆ. ಸಂಜೆ 5ಕ್ಕೆ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.