ಮಲ್ನಾಡ್ ಟಾಪ್ 3 ನ್ಯೂಸ್
-ಶಶಿಧರ್ ಈಚಲಬೈಲು ಅವರ ತಾಯಿ ಲಲಿತಮ್ಮ ನಿಧನ…!!
– ಶಿವಮೊಗ್ಗ : ಟಿವಿಎಸ್ ವಾಹನ ಹಾಗೂ ಗೂಡ್ಸ್ ವಾಹನ ಡಿಕ್ಕಿಯಿಂದ ರೈತ ಸಾವು..!!
– ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಎರಡು ವರ್ಷದ ಮಗು ಸಾವು..!!
NAMMUR EXPRESS NEWS
ಕಾಂಗ್ರೆಸ್ ಯುವ ಮುಖಂಡ, ಸಹಕಾರಿ ಶಶಿಧರ್ ಈಚಲಬೈಲ್ ತಾಯಿ ಲಲಿತಮ್ಮ (84) ಸೋಮವಾರ ನಿಧನರಾದರು. ಅವರು ಪುತ್ರರಾದ ನಿವೃತ್ತ ಡಿವೈಎಸ್ಪಿ ಶ್ರೀಧರ್ ಮತ್ತು ಶಶಿಧರ್ ಈಚಲಬೈಲ್ ಸೇರಿದಂತೆ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಸಂಜೆ 5 ಗಂಟೆಗೆ ಈಚಲಬೈಲಿನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
– ಶಿವಮೊಗ್ಗ : ಟಿವಿಎಸ್ ವಾಹನ ಹಾಗೂ ಗೂಡ್ಸ್ ವಾಹನ ಡಿಕ್ಕಿಯಿಂದ ರೈತ ಸಾವು..!!
ಶಿವಮೊಗ್ಗ: ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ರೈತರೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಶಿವಮೊಗ್ಗ – ಚಿತ್ರದುರ್ಗ ರಸ್ತೆಯ ಹೊಳೆಬೆನವಳ್ಳಿ ತಾಂಡಾ ಕ್ರಾಸ್ ರಸ್ತೆಯಲ್ಲಿ ಅಪಘಾತವಾಗಿದೆ.
ಹೊಳೆಬೆನವಳ್ಳಿಯ ಯಶವಂತಪ್ಪ ದನಗಳಿಗೆ ಹುಲ್ಲು ತರಲು ಟಿವಿಎಸ್ ವಾಹನದಲ್ಲಿ ತೆರಳಿದ್ದರು. ಈ ಸಂದರ್ಭ ಗೂಡ್ಸ್ ವಾಹನ ಡಿಕ್ಕಿ ಹೊಡೆದು ತಲೆ ಭಾಗ, ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಯಶವಂತಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಸಕ್ರೆಬೈಲು ಸಮೀಪ ಅವರ ಉಸಿರಾಟದಲ್ಲಿ ತೀವ್ರ ಸಮಸ್ಯೆಯಾಗಿತ್ತು. ಹಾಗಾಗಿ ಮೆಗ್ಗಾನ್ ಆಸ್ಪತ್ರೆಗೆ ಮರಳಿ ಕರೆತಂದು ಪರೀಕ್ಷಿಸಿದಾಗ ಯಶವಂತಪ್ಪ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಗೂಡ್ಸ್ ವಾಹನ ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
– ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಎರಡು ವರ್ಷದ ಮಗು ಸಾವು..!!
ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ಆಟವಾಡುತ್ತಿದ್ದ ಎರಡು ವರ್ಷದ ಮಗು ಗಂಭೀರ ಗಾಯಗೊಂಡು ಸಾವನ್ನಪ್ಪಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ಷಣ್ಮುಖ ಎಂಬುವವರ ಮಗು ವಿನಯ್ (2) ಮೃತ ದುರ್ದೈವಿ. ರಸ್ತೆಯಲ್ಲಿ ಆಟವಾಡುವಾಗ ಕೋಟೆ ಗಂಗೂರು ಕಡೆಯಿಂದ ಸಾಗರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿನಯ್ನ ಕಾಲು, ಮೈ, ಕೈಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







