Categories
ಅಪರಾಧ ಶಿವಮೊಗ್ಗ

ಮನೆಯಲ್ಲೇ ಗಾಂಜಾ ಬೆಳೆದ ವೈದ್ಯಕೀಯ ವಿದ್ಯಾರ್ಥಿಗಳು ಅರೆಸ್ಟ್

 

ಮನೆಯಲ್ಲೇ ಗಾಂಜಾ ಬೆಳೆದ ವೈದ್ಯಕೀಯ ವಿದ್ಯಾರ್ಥಿಗಳು ಅರೆಸ್ಟ್!

– ಶಿವಮೊಗ್ಗದಲ್ಲಿ ಘಟನೆ: ಇದೆಂಥಾ ಕಾಲ?

– ಅನೈತಿಕ ಸಂಬಂಧಕ್ಕೆ ಪತಿಯನ್ನೇ ಕೊಂದ ಪತ್ನಿ!

– ಮಗುವಿಗೆ ಹೊಡೆದ ಶಿಕ್ಷಕಿ ವಿರುದ್ಧ ಕೇಸ್!

 

NAMMUR EXPRESS NEWS

ಶಿವಮೊಗ್ಗ: ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ತಾವು ವಾಸವಿದ್ದ ಬಾಡಿಗೆ ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಇದೀಗ ಶಿವಮೊಗ್ಗ ಪೊಲೀಸರು 5 ಮಂದಿ ಎಂಬಿಬಿಎಸ್ ವಿಧ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಭಾರೀ ಕುತೂಹಲ ಮೂಡಿಸಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಅಬ್ದುಲ್ ಖಯ್ಯಂ, ಅರ್ಪಿತಾ, ವಿಘ್ನರಾಜ್, ವಿನೋದ್ ಕುಮಾರ್, ಪಾಂಡಿದೊರೈ ಬಂಧಿತ ಆರೋಪಿಗಳು. ಅಬ್ದುಲ್ ಖಯ್ಯಂ, ವಿಘ್ನರಾಜ್ ಹಾಗೂ ಅರ್ಪಿತಾ ಶಿವಮೊಗ್ಗದ ಶಿವಗಂಗಾ ಲೇಔಟ್ ನಲ್ಲಿ ವಾಸಕ್ಕೆ ಬಾಡಿಗೆ ಮನೆ ಪಡೆದಿದ್ದರು. ಅದೇ ಮನೆಯಲ್ಲೇ ಹೂ ಬೆಳೆಯುವ ಪಾಟ್‌ಗಳಲ್ಲಿ ಗಾಂಜಾ ಬೆಳೆದು, ಅದನ್ನು ಟೇಬಲ್‌ಫ್ಯಾನ್ ಗಾಳಿಯಿಂದ ಒಣಗಿಸಿ, ಪ್ಯಾಕೆಟ್ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ಬಳಿ ಗಾಂಜಾ ಕೊಳ್ಳಲು ಪಾಂಡಿದೊರೈ ಹಾಗೂ ವಿನೋದ್ ಕುಮಾರ್ ಹೋಗಿದ್ದರು.ಖಚಿತ ಮಾಹಿತಿ ಮೇರೆಗೆ ಶಿವಗಂಗಾ ಲೇಔಟ್ ನಿವಾಸದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಆರೋಪಿಗಳಿಂದ 6 ಸಾವಿರ ರೂ. ಮೌಲ್ಯದ ಹಸಿ ಗಾಂಜಾ, 20 ಸಾವಿರ ರೂ. ಮೌಲ್ಯದ ಒಣ ಗಾಂಜಾ, 30 ಸಾವಿರ ರೂ. ಮೌಲ್ಯದ ಚರಸ್, ಸೀರಿಂಜ್‌ಗಳು, ಹುಕ್ಕಾ ಕೊಳವೆ, 6 ಟೇಬಲ್ ಫ್ಯಾನ್ ಸೇರಿದಂತೆ ಇತರೆ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಸ್ನೇಹಿತರೊಟ್ಟಿಗೆ ಸೇರಿ ಗಂಡನನ್ನು ಕೊಲೆ ಮಾಡಿದ್ದು, ಇದೀಗ ನಾಲ್ವರು ಆರೋಪಿಗಳನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ದುರ್ದೈವಿಯನ್ನು ಬೆಳಗಾವಿಯ ಅಂಬೇಡ್ಕರ್ ನಗರದ ನಿವಾಸಿಯಾದ ಮೃತ ರಮೇಶ್ ಕಾಂಬಳೆ (38) ಎಂದು ತಿಳಿದು ಬಂದಿದ್ದು, ಇತ ವೃತ್ತಿಯಲ್ಲಿ ಪೇಂಟರ್ ಆಗಿದ್ದನೆಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಗೆ ಹೊಡೆದ ಶಿಕ್ಷಕಿ ವಿರುದ್ಧ ಕೇಸ್!: ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಕಾಡುಗೋಡಿಯ ಖಾಸಗಿ ಶಾಲೆಯೊಂದರ 4ನೇ ತರಗತಿ ವಿದ್ಯಾರ್ಥಿಗೆ 43 ಬಾರಿ ಥಳಿಸಿ ಗಾಯಗೊಳಿಸಿದ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಿಕ್ಷಕಿಯ ಥಳಿತದಿಂದ ವಿದ್ಯಾರ್ಥಿಯ ಮುಖ ಮತ್ತು ದೇಹದ ಮೇಲೆ ಗುರುತುಗಳಾಗಿದ್ದು, ಈ ಸಂಬಂಧ ಬಾಲಕನ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಗೃಹಜ್ಯೋತಿ ಅರ್ಜಿ ನೋಂದಣಿಗೆ ಹೊಸ ಲಿಂಕ್!

HOW TO APPLY : NEET-UG COUNSELLING 2023

Tunga college thirthahalli

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.