ಮೈಸೂರಿನಲ್ಲಿ ವಿದ್ಯುತ್ ದುರಂತ!
- ತಂತಿ ತಗುಲಿ ಅಪ್ಪ ಮಗ, ಕೂಲಿ ಕಾರ್ಮಿಕ ದುರ್ಮರಣ
ನಮ್ಮೂರ್ ಎಕ್ಸ್ ಪ್ರೆಸ್ ನ್ಯೂಸ್
ಮೈಸೂರು: ಮೈಸೂರಿನ ತಿ. ನರಸೀಪುರ ತಾಲೂಕಲ್ಲಿ ವಿದ್ಯುತ್ ತಗುಲಿ ಮೂವರು ಸಾವನಪ್ಪಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಅವಘಡ ಸಂಭವಿಸಿದೆ.
ತಿ.ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಬಳಿ ಘಟನೆ ನಡೆದಿದ್ದು, ಅಪ್ಪ ಮಗ, ಕೂಲಿ ಕಾರ್ಮಿಕ ದುರ್ಮರಣ ಹೊಂದಿದ್ದಾರೆ. 60 ವರ್ಷದ ರಾಚೇಗೌಡ, 35 ವರ್ಷದ ಹರೀಶ್, 40 ವರ್ಷದ ಕುಮಾರಸ್ವಾಮಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಭತ್ತದ ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದ ವೇಳೆ ಜಮೀನನ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಸ್ಥಳಕ್ಕೆ ಟಿ.ನರಸೀಪುರ ಗ್ರಾಮಾಂತರ ಪೊಲೀಸರ ಭೇಟಿ ಕೊಟ್ಟಿದ್ದಾರೆ.
ಯುವತಿ ಕಾರ್ ಶೆಡ್ಡಲ್ಲಿ ಆತ್ಮಹತ್ಯೆ!
ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ.
ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿದ್ದಳು ಜೊತೆಗೆ ನಗರದ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಅವರ ಸೊಸೆಯಾಗಿದ್ದಳು.
ಶನಿವಾರ ರಾತ್ರಿ ನವ್ಯಶ್ರೀ ತುಳಸಿ ಪೂಜೆ ಮಾಡಿ, ಅರಿಶಿನ, ಕುಂಕುಮ ಸ್ವೀಕರಿಸಿ ಬಂದಿದ್ದಳು. ಬಳಿಕ ಕಾರ್ ಶೆಡ್ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.
ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ರೇಪ್!?
- ಮುರುಘಾಶ್ರೀ ವಿರುದ್ಧ 694 ಪುಟಗಳ ಚಾರ್ಜ್ ಶೀಟ್
ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿದೆ. ಈ ಕುರಿತು ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಔಷಧ ಬೆರೆಸಿದ ಸೇಬು ನೀಡಿ ಮಕ್ಕಳ ಅತ್ಯಾಚಾರ ಮಾಡಿರುವ ಬಗ್ಗೆ ಅದರಲ್ಲಿ ಉಲ್ಲೇಖ ಮಾಡಲಾಗಿದೆ.
ಲೇಡಿ ವಾರ್ಡನ್ ಮೂಲಕ ಮಕ್ಕಳನ್ನು ಕರೆಸಿ, ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು ಅತ್ಯಾಚಾರಕ್ಕೆ ಬಳಸಿಕೊಂಡಿದ್ದಾರೆ. ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ವಿರೋಧಿಸಿದವರಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಇದೇ ರೀತಿ ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ.
ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆ ಅಡಿಯಲ್ಲೂ ಕೇಸ್ ದಾಖಲಾಗಿದ್ದು, 342 ಪುಟಗಳ 2 ಸೆಟ್ನಂತೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ, ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.