ರಾಘವೇಂದ್ರ ಅವರಿಗೆ ಒಲಿಯುತ್ತಾ ಕೇಂದ್ರ ಸಚಿವ ಸ್ಥಾನ?
– ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ರಾಘವೇಂದ್ರ ಹೆಸರು
– ಕರ್ನಾಟಕ ಲೋಕ ಸಭೆ ಮೇಲೆ ಹೈಕಮಾಂಡ್ ಕಣ್ಣು!
NAMMUR EXPRESS NEWS
ಬೆಂಗಳೂರು: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಅಥವಾ ಮರು ಹಂಚಿಕೆ ಆಗುವ ಸಾಧ್ಯತೆಗಳಿದ್ದು, ಈ ಬಾರಿ ಯಡಿಯೂರಪ್ಪ ಪುತ್ರ ಶಿವಮೊಗ್ಗ ಸಂಸದ ರಾಘವೇಂದ್ರ ಅವರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳಿವೆ.
ರಾಜ್ಯ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಕಹಿ ಅನುಭವದ ಆಧಾರದ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯದ ವಿಶ್ವಾಸವನ್ನು ತೆಗೆದುಕೊಳ್ಳುವ ಬಗ್ಗೆ ಹೈಕಮಾಂಡ್ ಯೋಚನೆ ಮಾಡಿದೆ.
ಯಡಿಯೂರಪ್ಪ ಪುತ್ರ ಬಿ. ವೈ.ರಾಘವೇಂದ್ರ ಅವರು ಯುವ ನಾಯಕರಾಗಿದ್ದು ಪ್ರಭಾವಿ ಆಗಿದ್ದಾರೆ.
ರಾಜ್ಯದಿಂದ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಎ.ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ, ಶೋಭಾ ಕರಂದ್ಲಾಜೆ ಸಚಿವರಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಒಟ್ಟು 28 ಸ್ಥಾನಗಳ ಪೈಕಿ 25ರಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಸಲ 20 ಸ್ಥಾನವನ್ನಾದ್ರೂ ಪಡೆಯಲು ಪ್ಲಾನ್ ಮಾಡಿಕೊಂಡಿದೆ. ಈ ಸ್ಥಾನ ಪಡೆಯಲು ಯಡಿಯೂರಪ್ಪ
ಅವರ ಸಂಘಟನೆ ಅನಿವಾರ್ಯ ಹೀಗಾಗಿ ರಾಘವೇಂದ್ರ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023