ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ರಮೇಶ್ ಶಂಕರಘಟ್ಟ ಉಸ್ತುವಾರಿ
– ಲೋಕ ಸಭಾ ಚುನಾವಣೆ ಹಿನ್ನೆಲೆ ಜವಾಬ್ದಾರಿ
NAMMUR EXPRESS NEWS
ಶಿವಮೊಗ್ಗ: ಲೋಕಸಭಾ ಚುನಾವಣೆಯ ಸಿದ್ಧತೆ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ದೃಷ್ಟಿಯಿಂದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಇವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಇವರು ನೇಮಿಸಿದ್ದಾರೆ. ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಲೋಕಸಭಾ ಚುನಾವಣೆಯ ಸಿದ್ಧತೆಯ ಬಗ್ಗೆ ಆಯಾಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಭೆಗಳನ್ನು ಆಯೋಜಿಸಿ ಪಕ್ಷದ ಕಾರ್ಯಕರ್ತರನ್ನು ಜಾಗೃತಿಗೊಳಿಸಲು ಜಿಲ್ಲಾ ಅಧ್ಯಕ್ಷರು ನೇಮಕಾತಿ ಅದೇಶದಲ್ಲಿ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಂಟ ಸಮುದಾಯದ ಸುಮಾರು 70 ಸಾವಿರಕ್ಕೂ ಹೆಚ್ಚು ಮತಗಳಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರ ಹೊರತುಪಡಿಸಿದರೆ ತೀರ್ಥಹಳ್ಳಿಯಲ್ಲಿ ಅತೀ ಹೆಚ್ಚು ಬಂಟ ಸಮುದಾಯದ ಮತಗಳು ಇವೆ. ರಮೇಶ್ ಶೆಟ್ಟಿಯವರನ್ನು ಉಸ್ತುವಾರಿಯಾಗಿ ನೇಮಿಸಿರುವ ಉದ್ದೇಶ ಬಿಜೆಪಿ ಪಕ್ಷದೆಡೆಗೆ ಹೆಚ್ಚು ಒಲವು ಹೊಂದಿರುವ ಬಂಟ ಸಮುದಾಯದ ಮತವನ್ನು ಕಾಂಗ್ರೆಸ್ ಪಕ್ಷದೆಡೆಗೆ ಸೆಳೆಯುವ ತಂತ್ರಗಾರಿಕೆ ಅಡಗಿದೆ ಎನ್ನಲಾಗುತ್ತಿದೆ.