ಶಿವಮೊಗ್ಗ, ಚಿಕ್ಕಮಗಳೂರು ಮಳೆ ಡೇಂಜರ್: ರಜೆ ಘೋಷಣೆ
– ಕೆಲವು ತಾಲೂಕಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
-ಯಾವ ಯಾವ ತಾಲೂಕು ರಜೆ? ಇಲ್ಲಿದೆ ಡೀಟೇಲ್ಸ್
– ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ 112 ಸಹಾಯವಾಣಿ
NAMMUR EXPRESS NEWS
ಶಿವಮೊಗ್ಗ /ಚಿಕ್ಕಮಗಳೂರು: ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಶೃಂಗೇರಿ, ಮೂಡಿಗೆರೆ, ತೀರ್ಥಹಳ್ಳಿ, ಹೊಸನಗರ ಭಾಗ ಜನಜೀವನ ಸಂಪೂರ್ಣ ಕಷ್ಟವಾಗಿದೆ. ಈ ನಡುವೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್. ಆರ್. ಪುರ, ಕಳಸ, ಮೂಡಿಗೆರೆ, ಚಿಕ್ಕಮಗಳೂರು ತಾಲೂಕು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನದಿಗಳು, ಹಳ್ಳಗಳು ತುಂಬಿ, ಅಪಾಯಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಪಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಭೇಟಿಯನ್ನು ನೀರಿನ ಹರಿವು ಕಡಿಮೆಯಾಗುವವರೆಗೆ ಸಂಭಂದಪಟ್ಟ ಇಲಾಖೆಗಳಿಂದ ನಿಷೇದಿಸಲಾಗಿರುತ್ತದೆ.