ಶಿವಮೊಗ್ಗ ಡಿಸಿಸಿ ಬ್ಯಾಂಕ್ ರಾಜ್ಯದ ನಂ.ಸಹಕಾರ ಬ್ಯಾಂಕ್!
– 2022-23ನೇ ಸಾಲಿನ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿಗೆ ಭಾಜನ
– ಡಾ.ಆರ್.ಎಂ.ಮಂಜುನಾಥ ಗೌಡ ಅವರಿಗೆ ಮತ್ತೊಂದು ಹಿರಿಮೆ
– ಡಿಸಿಸಿ ಬ್ಯಾಂಕ್ ಸಿಬ್ಬಂದಿ, ಆರ್.ಎಂ.ಅಭಿಮಾನಿಗಳ ಸಂತಸ
NAMMUR EXPRESS NEWS
ಶಿವಮೊಗ್ಗ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮತ್ತೊಂದು ಸಾಧನೆ ಮಾಡಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ನೀಡುವ 2022-23ನೇ ಸಾಲಿನ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಭಾಜನವಾಗಿದೆ.
ಹಾಲಿ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡ ಅವರು ಅಧ್ಯಕ್ಷರಾದ ಬಳಿಕ ರಾಜ್ಯದ ನಂಬರ್ 1 ಬ್ಯಾಂಕ್ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಇಂದ ಪ್ರಶಸ್ತಿ ಪಡೆದಿದೆ. ತಳಮಟ್ಟದಲ್ಲಿದ್ದ ಬ್ಯಾಂಕ್ ಇಂದು ಅತ್ಯುತ್ತಮ ಬ್ಯಾಂಕ್ ಆಗಿ ಹೊರ ಹೊಮ್ಮಿದೆ. ಮಂಜುನಾಥ ಗೌಡ ಅವರ ಆಡಳಿತ ದಕ್ಷತೆ ಮತ್ತು ಸಹಕಾರ ಕ್ಷೇತ್ರದಲ್ಲಿನ ಸೇವೆ ಈ ಬೆಳವಣಿಗೆಗೆ ಕಾರಣವಾಗಿದೆ.
ರಾಜ್ಯ ಅಪೆಕ್ಸ್ ಆವರಣದಲ್ಲಿ ಡೆುವ ಅವಾರ್ಡ ಕಾರ್ಯಕ್ರಮದಲ್ಲಿ ಶುಕ್ರವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥಗೌಡ ಅವರುಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ನಿರ್ದೇಶಕರು ಪ್ರಶಸ್ತಿ ಸ್ವೀಕಾರ ಮಾಡಲಿದ್ದಾರೆ.
ಡಿಸಿಸಿ ಬ್ಯಾಂಕ್ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ಇದರ ಸಿಬ್ಬಂದಿಗಳು ಹಾಗೂ ಮಂಜುನಾಥ ಗೌಡ ಅಭಿಮಾನಿಗಳು ಶುಭಾಶಯ ಸಲ್ಲಿಸಿದ್ದಾರೆ.