ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆ ರಂಗು
– ಜಿಲ್ಲಾ ನಿರ್ದೇಶಕ ಸ್ಥಾನಕ್ಕೆ ಬಂಡೆ ವೆಂಕಟೇಶ್ ಸ್ಪರ್ಧೆ
– ತೀರ್ಥಹಳ್ಳಿಯ ಪ್ರಭಾವಿ ನಾಯಕ ಈಗ ಜಿಲ್ಲಾ ಕಣಕ್ಕೆ
NAMMUR EXPRESS NEWS
ಶಿವಮೊಗ್ಗ: ಆಗಸ್ಟ್ 11ರಂದು ನಡೆಯುವ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆಗೆ ತೀರ್ಥಹಳ್ಳಿ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಜನಪ್ರಿಯ ನಾಯಕ, ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯ ಹಾಲಿ ಅಧ್ಯಕ್ಷರು ಮತ್ತು ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಹಾಲಿ ನಿರ್ದೇಶಕರು ಹಾಗೂ ರಾಜ್ಯ ಗ್ರಾಮ ಪಂಚಾಯತಿ ಒಕ್ಕೂಟದ ಉಪಾಧ್ಯಕ್ಷರಾಗಿರುವ ಬಂಡೆ ವೆಂಕಟೇಶ್ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.
ಆಗಸ್ಟ್ 11ರಂದು ನಡೆಯಲಿರುವ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಇವರ ಹಿತೈಷಿಗಳು, ಸ್ನೇಹಿತರು, ಬಂಧು ಬಳಗದವರು ಮತ್ತು ಒಕ್ಕಲಿಗ ಸಮುದಾಯದ ಮತದಾರರು ತನಗೆ ಮತ ಚಲಾಯಿಸುವುದರ ಮೂಲಕ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿ ಕೊಡುವುದರ ಮುಖಾಂತರ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಮಾಡಿಕೊಡಬೇಕಾಗಿ ಬಂಡೆ ವೆಂಕಟೇಶ್ ವಿನಂತಿಸಿದ್ದಾರೆ.