ಇಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ
– ನಗರದೆಲ್ಲೆಡೆ ಕಟ್ಟೆಚ್ಚರ: ಪೊಲೀಸ್ ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ
– ಎಸ್ ಪಿ ಮಿಥುನ್ ಕುಮಾರ್ ಮಾಹಿತಿ: ಏನೇನು ಬಂದೋಬಸ್ತ್?
NAMMUR EXPRESS NEWS
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಗುರುವಾರ ಹಿಂದೂ ಮಹಾ ಸಭಾ ಗಣಪತಿ ವಿಸರ್ಜನೆ ನಡೆಯಲಿದ್ದು ನಗರದ ಕೋಟೆ ಭಾಗದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣಪತಿಯ ವಿಸರ್ಜನಾ ಮೆರವಣಿಗೆಯ ರಾಜಬೀದಿ ಉತ್ಸವ ನಡೆಯಲಿದೆ. ಇದಕ್ಕಾಗಿ ಭಾರೀ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಈ ವಿಷಯವಾಗಿ ಮಾಧ್ಯಮಗಳಿಗೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಗಣಪತಿ ಮೆರವಣಿಗೆಯನ್ನು ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಸಲು ಹಾಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ನಗರದ ವಿವಿದೆಡೆ 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳು ಹಾಗೂ 2500 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್ ಅಧೀಕ್ಷಕರು 14 ಪೊಲೀಸ್ ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ಗಾರ್ಡ್ ಸಿಬ್ಬಂದಿಗಳು, 10 ಡಿಎಆರ್ ತುಕಡಿ, 15 ಕೆಎಸ್ಆರ್.ಪಿ ತುಕಡಿ, 02 ಆರ್.ಎ.ಎಫ್ ಕಂಪನಿಗಳು 100 ವಿಡಿಯೋ ಕ್ಯಾಮರಾಗಳು ಮತ್ತು 08 ದ್ರೋಣ್ ಕ್ಯಾಮರಾಗಳನ್ನು ನಿಯೋಜಿಸಲಾಗಿರುತ್ತದೆ ಹಾಗೂ ಮೆರವಣಿಗೆ ಮಾರ್ಗ ಮತ್ತು ಪ್ರಮುಖ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮೆರವಣಿಗೆ ಮಾರ್ಗ ಹೇಗೆ?:
ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದೆ. ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧೀ ಬಜಾರ್ ಮುಖ್ಯ ರಸ್ತೆ ಎಸ್.ಎನ್. ಸರ್ಕಲ್, ಬಿ.ಹೆಚ್ ರಸ್ತೆ ಮುಖಾಂತರ ಎ.ಎ ಸರ್ಕಲ್, ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್ ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಬಳಿಯ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗತ್ತದೆ.