Categories
ಶಿವಮೊಗ್ಗ

ಶಿವಮೊಗ್ಗ ಡಿಸಿ ಸೆಲ್ವಮಣಿ ವರ್ಗಾವಣೆ: ಹೊಸ ಡಿಸಿ ನೇಮಕ

ಶಿವಮೊಗ್ಗ ಡಿಸಿ ಸೆಲ್ವಮಣಿ ವರ್ಗಾವಣೆ: ಹೊಸ ಡಿಸಿ ನೇಮಕ
– ನೂತನ ಜಿಲ್ಲಾಧಿಕಾರಿಯಾಗಿ ಶಿರಸಿ ಮೂಲದ ಗುರುದತ್ತ ಹೆಗ್ಡೆ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಆ‌ರ್. ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಲಾಗಿದೆ.ನೂತನ ಜಿಲ್ಲಾಧಿಕಾರಿಯಾಗಿ ಶಿರಸಿ ಮೂಲದ ಗುರುದತ್ತ ಹೆಗ್ಡೆ ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ. ಸೆಲ್ವಮಣಿ ಅವರನ್ನು ತಕ್ಷಣ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಂಗಳೂರು ಇ-ಆಡಳಿತ ಕೇಂದ್ರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನೆಗದ್ದೆ ಗ್ರಾಮದವರಾದ ಇವರು, ಬೆಂಗಳೂರಿನ ಆರ್. ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಬಳಿಕ 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.