Categories
ಶಿವಮೊಗ್ಗ

ಶಿವಮೊಗ್ಗ: ಬೆಳಗಿನ ಜಾವ KSRTC ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಶಿವಮೊಗ್ಗ: ಬೆಳಗಿನ ಜಾವ KSRTC ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ 
– ಸಾಗರ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವು..!!
– ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!!

NAMMUR EXPRESS NEWS 
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್‌ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶಿವಮೊಗ್ಗ ತಾಲೂಕು ಬೇಡರಹೊಸಹಳ್ಳಿ ಸಮೀಪ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 5,30 ಕ್ಕೆ ಘಟನೆ ಸಂಭವಿಸಿದೆ. ರಾಯಚೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಬಸ್‌ ಪಲ್ಟಿಯಾಗಿದೆ. ಬಸ್ಸಿನಲ್ಲಿ 50 ಪ್ರಯಾಣಿಕರು ಇದ್ದರು. ಈ ಪೈಕಿ ಮೂವರಿಗೆ ಗಂಭೀರ ಸ್ವರೂಪದ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಈ ರಸ್ತೆಯಲ್ಲಿ ಕೆಲವು ಹೊತ್ತು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

– ಸಾಗರ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವು..!!

ಸಾಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ಸಾಗರದ ಜನ್ನತ್ ಶಾಲೆಯ ಹತ್ತಿರ ನಡೆದಿದೆ. ಶಿವಪ್ಪ ನಾಯಕ ನಗರದ ನಿವಾಸಿ ಅಬ್ದುಲ್ ಖಯೂಮ್ (76) ಮೃತ ದುರ್ದೈವಿ. ಅಬ್ದುಲ್ ಖಯೂಮ್ ತಮ್ಮ ನಿವಾಸದಿಂದ ದ್ವಿಚಕ್ರ ವಾಹನದಲ್ಲಿ ಸಾಗರ ಪೇಟೆ ಕಡೆಗೆ ಹೊರಟಿದ್ದರು. ಈ ವೇಳೆ ಸಾಗರ ಪೇಟೆಯಿಂದ ಶಿವಮೊಗ್ಗ ರಸ್ತೆಗೆ ವೇಗವಾಗಿ ಬರುತ್ತಿದ್ದ ಮಾತೊಂದು ದ್ವಿಚಕ್ರ ವಾಹನ ಅಬ್ದುಲ್‌ ಖಯೂಮ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಅಬ್ದುಲ್ ಖಯೂಮ್ ಅವರ ತಲೆ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

– ಭದ್ರಾವತಿ ಸಮೀಪ ರೈಲಿಗೆ ಸಿಲುಕಿ ವ್ಯಕ್ತಿ ಸಾವು..!!

ಶಿವಮೊಗ್ಗ: ಭದ್ರಾವತಿ – ಮಸರಹಳ್ಳಿ ರೈಲ್ವೆ ನಿಲ್ದಾಣದ ಮಧ್ಯೆ ಹಳಿ ಮೇಲೆ ಸೋಮವಾರ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಸುಮಾರು 45 ವರ್ಷದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ರೈಲ್ವೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತನು 5.4 ಅಡಿ ಎತ್ತರ, ಸಾದಾರಣ ಮೈಕಟ್ಟು, ಗೋದಿ ಮೈ ಬಣ್ಣ, ಕಪ್ಪು ಬಣ್ಣದ 2 ಇಂಚು ಉದ್ದದ ತಲೆ ಕೂದಲು, ಅರ್ಧ ಇಂಚು ಕಪ್ಪು ಗಡ್ಡ, ಮೀಸೆ, ಬಲಗೈನಲ್ಲಿ ಹೂವಿನ ತರಹ ಕಾಣುವ ಹಚ್ಚೆ ಇರುತ್ತದೆ. ಮೃತ ವ್ಯಕ್ತಿಯು ನೀಲಿ ಬಣ್ಣದ ಪ್ಯಾಂಟ್, ಪಾಚಿ ಹಸಿರು ಕಪ್ಪು ಗ್ರೇ ಕಲರ್ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.