Categories
ಶಿವಮೊಗ್ಗ

ಶಿವಮೊಗ್ಗದಲ್ಲಿ ಯಶಸ್ವಿ ಉದ್ಯೋಗ ಮೇಳ

ಶಿವಮೊಗ್ಗದಲ್ಲಿ ಯಶಸ್ವಿ ಉದ್ಯೋಗ ಮೇಳ
– ನೂರಾರು ಕಂಪನಿ ಹಾಜರ್: ಅನೇಕರಿಗೆ ಉದ್ಯೋಗ
– ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟನೆ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ನೂರಾರು ಮಂದಿಗೆ ಉದ್ಯೋಗ ನೀಡುವಲ್ಲಿ ಸಫಲವಾಯಿತು. 5000ಕ್ಕೂ ಹೆಚ್ಚು ಮಂದಿ ನಿರುದ್ಯೋಗಿಗಳು ಭಾಗವಹಿಸಿದರು.
ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಮಲ್ಲಿ ಉದ್ಯೋಗ ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟನೆ ಮಾಡಿ ಉದ್ಯೋಗ ನೀಡುವ ಕಂಪನಿಗಳಿಗೆ ಧನ್ಯವಾದ ಹೇಳಿದರು.
ಸಂದರ್ಶನದಲ್ಲಿ 100ಕ್ಕೂ ಹೆಚ್ಚು ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿದ್ದವು.

ಬೆಳಗ್ಗೆಯಿಂದಲೇ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಸಾವಿರಾರು ಮಂದಿ ಅಭ್ಯರ್ಥಿಗಳು ಆಗಮಿಸಿದ್ದರು. ಕೊಂಚ ತಡವಾಗಿ ಶುರುವಾದ ಉದ್ಯೋಗ ಮೇಳ ಮಧ್ಯಾಹ್ನದ ಹೊತ್ತಿಗೆ ವೇಗ ಪಡೆದುಕೊಂಡಿತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.