Categories
ಶಿವಮೊಗ್ಗ

ಶಿವಮೊಗ್ಗದಲ್ಲಿ ರಸ್ತೆಯಲ್ಲಿದ್ದ ವಾಹನಗಳು ಪುಡಿ ಪುಡಿ!

ಶಿವಮೊಗ್ಗದಲ್ಲಿ ರಸ್ತೆಯಲ್ಲಿದ್ದ ವಾಹನಗಳು ಪುಡಿ ಪುಡಿ!
– ದುಷ್ಕರ್ಮಿಗಳಿಂದ ಗಾಂಜಾ ನಶೆಯಲ್ಲಿ ಕೃತ್ಯ ಶಂಕೆ
– ಮನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಬೈಕ್‌ ಹಾನಿ

NAMMUR EXPRESS NEWS
ಶಿವಮೊಗ್ಗ: ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್‌ಗಳನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ‌ ಹಾನಿ ಮಾಡಿದ್ದಾರೆ. ಕಾರಗಳ ಗಾಜು ಚೂರು ಚೂರು ಮಾಡಿದ್ದು, ಜಗದೀಶ್ ಎಂಬವರಿಗೆ ಸೇರಿದ ಅಂಗಡಿಯ ಬೀಗವನ್ನು ಮಚ್ಚಿನಿಂದ ಹೊಡೆದು ಹಾನಿ ಮಾಡಿದ್ದಾರೆ.

ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಶಾಸಕ ಎಸ್ಎ‌ನ್ ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಗಾಂಜಾ ಪ್ಯಾಕೇಟ್ ಹಾಗೂ ಮದ್ಯದ ಬಾಟಲ್‌ಗಳು ಪತ್ತೆಯಾಗಿವೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.