ಇದು ನಿಮ್ ಸುದ್ದಿ.. ಎಲ್ಲೆಲ್ಲಿ ಏನೇನು?
ಆ.22ರಿಂದ ಶಿವಮೊಗ್ಗದಲ್ಲಿ ಸೈನಿಕ ನೇಮಕಾತಿ ರ್ಯಾಲಿ
– ಆಗಸ್ಟ್ 22ರಿಂದ 31ರವರೆಗೆ ನಗರದ ನೆಹರೂ ಸ್ಟೇಡಿಯಂನಲ್ಲಿ ರ್ಯಾಲಿ
– ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ
– ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ದೈಹಿಕ ಕ್ಷಮತಾ ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ಆಗಸ್ಟ್ 22ರಿಂದ 31ರವರೆಗೆ ನಗರದ ನೆಹರೂ ಸ್ಟೇಡಿಯಂನಲ್ಲಿ ನಡೆಸಲಾಗುವುದು ಎಂದು ಕರ್ನಲ್ ಕೃಷ್ಣನ್ ಕಶ್ಯಪ್ ಅವರು ಹೇಳಿದ್ದಾರೆ.
ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್ಯಾಲಿಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ರ್ಯಾಲಿಯಲ್ಲಿ ಮಂಗಳೂರು ಸೈನಿಕ ನೇಮಕಾತಿ ಘಟಕವು ಈಗಾಗಲೆ ನಡೆಸಿದ ಆನ್ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯುರ, ಾರವಾಡ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಒಟ್ಟು 11 ಜಿಲ್ಲೆಗಳ ಅಭ್ಯರ್ಥಿಗಳ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಈಗಾಗಲೆ ರವಾನಿಸಲಾಗಿದ್ದು, ಪ್ರತಿ ಜಿಲ್ಲೆಗಳ ಅಭ್ಯರ್ಥಿಗಳಿಗೆ ದಿನಾಂಕವನ್ನು ನಿಗಧಿಗೊಳಿಸಲಾಗಿದೆ ಎಂದರು.
ನೇಮಕಾತಿಗೆ ಪೂರಕವಾಗಿ ನಿಯಮಾನುಸಾರ ಅಭ್ಯರ್ಥಿಯು ಹೊಂದಿರುವ ದೈಹಿಕ ಸಾಮರ್ಥ್ಯವನ್ನು ಧೃಡೀಕರಿಸುವ ಕ್ರೀಡೆ, ಚಟುವಟಿಕೆ ನಡೆಸಲಾಗುವುದು ಎಂದ ಅವರು, ಪ್ರತಿದಿನ 800-900ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕಳೆದ ಸಾಲಿನಲ್ಲಿ ನೆರೆಯ ಹಾವೇರಿ ಜಿಲ್ಲೆಯಲ್ಲಿ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಆಯ್ಕೆ ಬಯಸಿ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನೀರು, ಶೌಚ ಹಾಗೂ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.
ಅಭ್ಯರ್ಥಿಗಳ ದೈಹಿಕ ಸಾಮರ್ಥ್ಯ ಮತ್ತು ಕ್ರೀಡಾ ಚಟುವಟಿಕೆಗಳೊಂದಿಗೆ ದಾಖಲಾತಿಗಳ ಪರಿಶೀಲನೆಯೂ ಇದೇ ಆವರಣದಲ್ಲಿ ನಡೆಯಲಿದೆ. ಅದಕ್ಕಾಗಿ ಸಂಬಧಿಸಿದ ಇಲಾಖೆಗಳ ಸ್ಥಳೀಯ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದ ಅವರು ಆಗಸ್ಟ್ 23ರಂದು ಬೆಳಿಗ್ಗೆ 6.30ಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ
ಶಿವಮೊಗ್ಗ: ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಆ.27 ರಿಂದ ಸೆ. 25ರವರೆಗೆ ಒಂದು ತಿಂಗಳು ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿಲಾಗುತ್ತಿದೆ.
ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ ಬಿಸ್ಕತ್, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್, ಪೀನಟ್ ಕುಕಿಸ್, ವೆನಿಲಾ ಬಟನ್, ಬನಾನಾ ಕೇಕ್, ಕೋಕೊನಟ್ ಕ್ಯಾಸಲ್ಸ, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಬ್ಲಾಕ್ ಫಾರೆಸ್ಟ ಕೇಕ್, ಸ್ವಿಸ್ ರೋಲ್, ಜೆಲ್ ಕೇಕ್, ಬಟರ್ ಐಸಿಂಗ್, ಮಸಾಲಾ ಡನಟ್, ಮಿಲ್ಕ್ ಬ್ರೆಡ್, ಬ್ರೌನಬ್ರೆಡ್, ಫಿಜ್ಜಾ, ಪಪ್ ಪೇಸ್ಟ್ರೀ, ಡ್ಯಾನಿಷ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಉತ್ಪನ್ನಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಈ ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವವರು ಆ. 25 ರೊಳಗಾಗಿ ಡಾ. ಜಯಶ್ರೀ ಎಸ್.-9449187763, ಡಾ. ಶಿವಲೀಲಾ ಪಾಟೀಲ್ -7411680410, ಜಯಶಂಕರ-9686555897 ಇವರುಗಳನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರನ್ನು ನೊಂದಾಯಿಸಿಕೊಳ್ಳುವುದು. ತರಬೇತಿ ಶುಲ್ಕ ರೂ. 3500/- ಆಗಿರುತ್ತದೆ.
ಲೋಕಾಯುಕ್ತ: ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ, ಆ.27 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಆ.28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ, ಆ.29 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ, ಆ-30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.