ಟಾಪ್ ನ್ಯೂಸ್ ಶಿವಮೊಗ್ಗ
ರಾಮೇಶ್ವರಂ ಕೆಫೆ ಕೇಸ್: ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತನ ವಿಚಾರಣೆ!
– ಎನ್ಐಎ ಅಧಿಕಾರಿಗಳಿಂದ ವಿಚಾರಣೆ: ಏನಿದು ಕೇಸ್?
– ಶಿವಮೊಗ್ಗ ಸೈಬರ್ ಕ್ರೈಂ ಎಎಸ್ಐ ಲೋಕಾಯುಕ್ತ ಬಲೆಗೆ.!
NAMMUR EXPRESS NEWS
ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಉಗ್ರರ ಸಂಪರ್ಕದ ಎನ್ಐಎ ವಿಚಾರಣೆಗೆ ಸಂಬಂಧಪಟ್ಟಂತೆ ಬಿಜೆಪಿ ನಗರ ಘಟಕದ ಕಾರ್ಯಕರ್ತನ ವಿಚಾರಣೆ ನಡೆಸಲಾಗಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಆದರೆ ಯಾವ ಕಾರಣಕ್ಕಾಗಿ ಇನ್ನು ನಿಗೂಢವಾಗಿದೆ. ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.ಇಬ್ಬರ ವಿಚಾರಣೆ ಕೂಡ ಮಾಡಲಾಗಿತ್ತು. ಅದರ ಬೆನ್ನಲ್ಲೆ ತೀರ್ಥಹಳ್ಳಿಯ ಬಿಜೆಪಿಯ ಯುವ ಕಾರ್ಯಕರ್ತನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆ ನಡೆಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ನಗರ ಘಟಕ ಜೊತೆ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಸೈಬರ್ ಕ್ರೈಂ ಎಎಸ್ಐ ಲೋಕಾಯುಕ್ತ ಬಲೆಗೆ.!
ಶಿವಮೊಗ್ಗ ಸೈಬರ್ ಕ್ರೈಂ ವಿಭಾಗದಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ರೆಹಮಾನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು 1 ಲಕ್ಷ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು ಮಟ್ಕಾ ದಂದೆ ನಡೆಸುವ ಸಲುವಾಗಿ ರೂ.1,20,000 ಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರ ಬಾಪ್ತಾಗಿ ರೂ. 1 ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.