Categories
ಶಿವಮೊಗ್ಗ

ಗಣಪತಿ ಮೂರ್ತಿ ತರಲು ಹೋದ ಇಬ್ಬರು ಸ್ಥಳದಲ್ಲೇ ಸಾವು!

ಗಣಪತಿ ಮೂರ್ತಿ ತರಲು ಹೋದ ಇಬ್ಬರು ಸ್ಥಳದಲ್ಲೇ ಸಾವು!
* ಇನ್ನಿತರ ಮೂರು ಜನ ಯುವಕರಿಗೂ ಗಂಭೀರ ಗಾಯ
* 9 ಜನ ಯುವಕರಿದ್ದ ಟಾಟಾ ಏಸ್ ವಾಹನ ಪಲ್ಟಿ

NAMMUR EXPRESS NEWS
ಶಿವಮೊಗ್ಗ:ಗಣಪತಿ ಮೂರ್ತಿಯನ್ನು ತರಲು ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿ ಹೊಡೆದಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ಸೆ. 07ರಂದು ಬೆಳಿಗ್ಗೆ ವರದಿಯಾಗಿದೆ.
ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಮೃತರನ್ನ 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ.
ಲಿಂಗದಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದರೆ ಮತ್ತಿ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಇನ್ನಿತರ ಮೂರು ಜನ ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗಿರುವ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು ತೀವ್ರವಾದ ರಕ್ತಸ್ರಾವವಾಗಿದೆ.
ಚಾಲಕ ಮನೋಜ್ ಹಾಗೂ ಮತ್ತೋರ್ವನನ್ನ ಮೆಗ್ಗಾನ್ ತುರ್ತುಘಟಕಕ್ಕೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಯುವಕರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಟೋ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರುವ ಲಿಂಗದಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.