Categories
ಶಿವಮೊಗ್ಗ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ – ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿಗೆ ಭೇಟಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ
– ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿಗೆ ಭೇಟಿ

NAMMUR EXPRESS NEWS
ತೀರ್ಥಹಳ್ಳಿ: ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೆ.14ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸ್ಥಳೀಯ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಸೆ.14ರಂದು ಬೆಳಗ್ಗೆ 9.35ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಸಾಗರ ರಸ್ತೆಯ ಪಿಇಎಸ್‌ಐಟಿ ಕಾಲೇಜಿನ ಪ್ರರೇಣಾ ಸಭಾಂಗಣದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30ಕೆ ಇಎಸ್‌ಐ ಆಸ್ಪತ್ರೆ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ತೀರ್ಥಹಳ್ಳಿಗೆ ತೆರಳಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಸೆ.15ರಂದು ಬೆಳಗ್ಗೆ 9 ಗಂಟೆಗೆ ತೀರ್ಥಹಳ್ಳಿಯ ಚಕ್ಕೊಡುಬೈಲಿನಿಂದ ಹೊರಟು ಬೆಳಗ್ಗೆ 11.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಮಾಡಲಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.