ಕಾವೇರುತ್ತಿದೆ ಡಿಸಿಸಿ ಬ್ಯಾಂಕ್ ಚುನಾವಣೆ..!
– ಆರ್ಎಂಎಂ, ಶ್ರೀಕಾಂತ್, ಎಸ್.ಪಿ ದಿನೇಶ್, ಮರಿಯಪ್ಪ ಸೇರಿ ಘಟಾನುಘಟಿಗಳ ನಾಮಪತ್ರ ಸಲ್ಲಿಕೆ
– ಜೂನ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
NAMMUR EXPRESS NEWS
ಶಿವಮೊಗ್ಗ : ಡಿಸಿಸಿ (ಜಿಲ್ಲಾ ಸಹಕಾರ ಕೇಂದ್ರ) ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ ಮಂಜು ನಾಥ ಗೌಡ, ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ಸೇರಿದಂತೆ ಘಟಾ ನುಘಟಿಗಳಿಂದ ನಾಮಪತ್ರ ಸಲ್ಲಿಕೆ ಆಗಿದೆ.
ಈವರೆಗೆ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದು, ಹಿಂದಿನ ಆಡಳಿತ ಮಂಡಳಿಯಲ್ಲಿದ್ದ ನಾಲ್ವರು ಮರು ಆಯ್ಕೆ ಬಯಸಿ ಉಮೇದು ವಾರಿಕೆ ಸಲ್ಲಿಸಿದ್ದಾರೆ. ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ, ಮಾಜಿ ನಿರ್ದೇಶಕ ಕೆ.ಪಿ ದುಗ್ಗಪ್ಪಗೌಡ, ಎಸ್.ಪಿ ದಿನೇಶ್, ಅಗಡಿ ಅಶೋಕ್ ನಾಮಪತ್ರ ಸಲ್ಲಿಸಿದ್ದಾರೆ.
ವಿಶೇಷವೆಂದರೆ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್, ನಗರ ಸಭೆ ಮಾಜಿ ಮೇಯರ್ ಎಸ್.ಕೆ ಮರಿಯಪ್ಪ, ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸೇರುವ ನಿರೀಕ್ಷೆಯಿಂದ ಕಣಕ್ಕಿಳಿದಿದ್ದಾರೆ. ಎಸ್.ಕೆ ಮರಿಯಪ್ಪ ಈಗಾಗಲೇ ಸಿಟಿ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಜವಾಬ್ದಾರಿ ನಿರ್ವಹಣೆ ಮಾಡಿ ಹಿರಿಯ ಸಹಕಾರಿಗಳ ಪಟ್ಟಿಗೆ ಸೇರಿದ್ದಾರೆ. ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಇದೇ ಮೊದಲ ಬಾರಿಗೆ ಸಹ ಕಾರಿ ವಲಯಕ್ಕೆ ಡಿಸಿಸಿ ಬ್ಯಾಂಕ್ ಮೂಲಕ ಎಂಟ್ರಿ ನೀಡಲು ಮುಂದಾಗಿ ದ್ದಾರೆ. ಕೆ.ಎಲ್ ಜಗದೀಶ್ವರ್, ರವೀಂದ್ರ, ಶಿವಶಂಕರ್, ಹನುಮಂತಪ್ಪ ನಾಮಪತ್ರ ಸಲ್ಲಿಸಿರುವವರ ಪಟ್ಟಿಯಲ್ಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಜೂ.20ರವರೆಗೂ ಅವಕಾಶವಿದ್ದು ಇನ್ನೂ ಹಲವು ಘಟಾನುಘಟಿಗಳು ಉಮೇದುವಾರಿಕೆ ಸಲ್ಲಿಸುವ ಸಾಧ್ಯತೆಗಳಿವೆ.
ಎಂ.ಶ್ರೀಕಾಂತ್ ನಾಮಪತ್ರ ಸಲ್ಲಿಕೆ: ಕಳೆದ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್ನಿಂದ ಕಾಂಗ್ರೆಸ್ ಸೇರಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಬಯಸಿರುವ ಅವರು ಶಿವಮೊಗ್ಗತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಕ್ಷೇತ್ರ ಒಂದರಿಂದ ಸ್ಪರ್ಧೆ ಬಯಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ನಿರ್ದೇಶಕರ ಆಯ್ಕೆಗೆ ಜೂನ್ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರದಾನ ಕಚೇರಿಯಲ್ಲಿ ಮತದಾನ ನಡೆಯಲಿದೆ. ಜೂ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಜೂ.20 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಜೂ.21ರಂದು ನಾಮಪತ್ರ ಪರಿಶೀಲನೆ ಹಾಗೂ ಜೂ.22ರಂದು ನಾಮಪತ್ರ ಹಿಂಪಡೆಯಲು ಕಡೇ ದಿನವಾಗಿದೆ.ಜೂ.28ರಂದು ಬೆಳಗ್ಗೆ 9 ಗಂಟೆ ಯಿಂದ ಸಂಜೆ 4 ಗಂಟೆಯವರೆಗೆ ಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿ ಕಟ್ಟಡ ದಲ್ಲಿ ಮತದಾನ ನಡೆಯಲಿದೆ.ಅಂದೇ ಫಲಿತಾಂಶ ಹೊರಬೀಳಲಿದೆ.