ಯುವ ಪೀಳಿಗೆ ದೇಶ ಸೇವೆಗೆ ಸಜ್ಜಾಗಬೇಕು : ಪ್ರಾಚಾರ್ಯ ವಿಮಲಾಕಾಂತ ಪಾಟೀಲ
NAMMUR EXPRESS SINDAGI : ಸಿಂದಗಿ : ಇಂದಿನ ಸಮಾಜದಲ್ಲಿರುವ ಹಲವಾರು ಸಮಸ್ಯೆಗಳನ್ನು ನಿವಾರಿಸಲು ನಾವು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ದೇಶ ಸೇವೆಗೆ ಮುಂದಾಗಬೇಕಿದೆ ಎಂದು ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು. ಪಟ್ಟಣದ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಪವಿವ ಸಂಸ್ಥೆಯ ವಿವಿಧ ಅಂಗಸAಸ್ಥೆಗಳ ಸಹಯೋಗದಲ್ಲಿ ೭೭ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಸಮಾರಂಭದಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಓದಿಕೊಳ್ಳುವುದರ ಜೊತೆಗೆ ಪ್ರಪಂಚ ಜ್ಞಾನದ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ನಮ್ಮ ಮಹಾನ ಭಾರತದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಕೊಡುಗೆಯನ್ನು ನೀಡಬೇಕು. ಭಾರತವು ಜಗತ್ತಿನಲ್ಲಿ ಅತಿದೊಡ್ಡ ಜಾತ್ಯಾತೀತ ಮತ್ತು ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಜಗತ್ತಿನಲ್ಲಿ ಎರಡನೇಯ ದೊಡ್ಡ ಸೇನಾ ಪಡೆಯನ್ನು ಹೊಂದಿರುವ ದೇಶವಾಗಿದೆ. ಮೊದಲ ಪ್ರಯತ್ನದಲ್ಲಿಯೇ ಮಂಗಳಯಾನ ಯಶಸ್ವಿಯಾಗಿದೆ. ಸ್ವತಂತ್ರ ಭಾರತದಲ್ಲಿ ಇಂದಿಗೂ ಸಹ ನಾನಾ ಕಡೆಗಳಲ್ಲಿ ಅಸಮಾನತೆ, ದೌರ್ಜನ್ಯ, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು, ಸರ್ಕಾರದ ಮೇಲಿನ ಭ್ರಷ್ಟಾಚಾರ, ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಎದುರಿಸುತ್ತಿರುವ ಆಪಾದನೆ, ಪರಸ್ಪರ ಮಾತಿನ ಕೆಸರಾಟಗಳ ಬೆಳವಣಿಗೆಯನ್ನು ನೋಡಿದರೆ ವಿಷಾದನೀಯವೆನಿಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯರಾದ ಡಿ.ಎಂ.ಪಾಟೀಲ, ಬಿ.ಜಿ.ಅವಟಿ, ಜೆ.ಸಿ.ನಂದಿಕೋಲ, ದಿವಾಕರ ಮಠ, ಶರಣು ಜೋಗೂರ, ಬಿ.ಎಂ.ಸಿAಗನಳ್ಳಿ, ಎನ್.ಸಿ.ಸಿ. ಅಧಿಕಾರಿ ರವಿ ಲಮಾಣಿ, ದೈಹಿಕ ಉಪನ್ಯಾಸಕರಾದ ರವಿ ಗೋಲಾ, ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ವಿವಿಧ ಅಂಗ ಸಂಸ್ಥೆಗಳ ಬೋಧಕ ಬೋಧಕೇತರ ಸಿಬ್ಬಂದಿ, ಎನ್.ಎಸ್.ಎಸ್., ಎನ್.ಸಿ.ಸಿ. ವಿದ್ಯಾರ್ಥಿಗಳು ಇನ್ನಿತರರು ಇದ್ದರು.
ಇದನ್ನೂ ಓದಿ : ತೀರ್ಥಹಳ್ಳಿ ರೆಸಾರ್ಟ್ ಅಲ್ಲಿ ಸಿಕ್ತು ವಿದೇಶಿ ಮದ್ಯ, ಪ್ರಾಣಿಗಳ ಕೊಂಬು!
HOW TO APPLY : NEET-UG COUNSELLING 2023