ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
ಐಪಿಎಲ್ -2025
* ಗುಜರಾತ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಲಕ್ನೋ
* ಪಂಜಾಬ್ ವಿರುದ್ಧ ಅಬ್ಬರಿಸಿದ ಹೈದ್ರಾಬಾದ್
NAMMMUR EXPRESS SPORTS NEWS
* ಗುಜರಾತ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ ಲಕ್ನೋ
ಲಕ್ನೋ: ಗುಜರಾತ್ ವಿರುದ್ಧದ ನಡೆದ ಪಂದ್ಯದಲ್ಲಿ ಲಕ್ನೋ ತಂಡ 6 ವಿಕೆಟ್ಗಳ ಜಯ ಸಾಧಿಸಿದೆ. 181 ರನ್ಗಳ ಗುರಿಯನ್ನು ಲಕ್ನೋ ತಂಡ ಇನ್ನು 3 ಎಸೆತಗಳ ಬಾಕಿ ಇರುವಾಗಲೇ ತಲುಪಿತು. ಐಡೆನ್ ಮಾರ್ಕ್ರಾಮ್ ಮತ್ತು ನಿಕೋಲಸ್ ಪೂರನ್ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು,ಮೊದಲು ಬ್ಯಾಟ್ ಮಾಡಿದ ಗುಜರಾತ್ ಪರ ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ ಅರ್ಧಶತಕ ಸಿಡಿಸಿ ತಂಡವನ್ನು 20 ಓವರ್ಗಳಲ್ಲಿ 180 ರನ್ಗಳಿಗೆ ಕೊಂಡೊಯ್ದರು. ಇದಕ್ಕೆ ಉತ್ತರವಾಗಿ ಲಕ್ನೋ ತಂಡ 19.3 ಓವರ್ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 186 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದಿತು. ಲಕ್ನೋ ಪರ ಪೂರನ್ 34 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಏಳು ಸಿಕ್ಸರ್ಗಳ ಸಹಾಯದಿಂದ 61 ರನ್ ಗಳಿಸಿದರೆ, ಮಾರ್ಕ್ರಾಮ್ 31 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ 58 ರನ್ ಗಳಿಸಿದರು.
* ಪಂಜಾಬ್ ವಿರುದ್ಧ ಅಬ್ಬರಿಸಿದ ಹೈದ್ರಾಬಾದ್
ಹೈದ್ರಾಬಾದ್: ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ನಡುವಿನ 171ನ ರನ್ಗಳ ಜೊತೆಯಾಟದ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ಎರಡನೇ ಅತ್ಯಧಿಕ ರನ್ ಚೇಸ್ ಮಾಡಿ ಪಂಜಾಬ್ ಕಿಂಗ್ಸ್ ತಂಡವನ್ನು ಎಂಟು ವಿಕೆಟ್ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಸನ್ರೈಸರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನಕ್ಕೇರಿದೆ.
ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ಗಳಲ್ಲಿ ಬರೋಬ್ಬರಿ 245 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸನ್ರೈಸರ್ಸ್ ಹೈದರಾಬಾದ್ ತಂಡ ಆರಂಭಿಕ ಅಭಿಷೇಕ್ ಶರ್ಮಾ ಅವರ ದಾಖಲೆಯ ಐಪಿಎಲ್ ಶತಕದ ಬಲದಿಂದ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿ ಈ ಸೀಸನ್ನ ಎರಡನೇ ಗೆಲುವು ದಾಖಲಿಸಿದೆ.
ಮಿಂಚಿದ ಅಯ್ಯರ್: ಇದಕ್ಕೆ ಮೊದಲು ಶ್ರೇಯಸ್ ಅಯ್ಯರ್ ನೇತೃತ್ವದಲ್ಲಿ ಪಂಜಾಬ್ ಕಿಂಗ್ಸ್ ತಂಡ ಸವಾಲಿನ ಮೊತ್ತ ಗಳಿಸಿತ್ತು. ಆರಂಭ ಆಟಗಾರರಾದ ಪ್ರಿಯಾಂಶ್ ಆರ್ಯ (36 ರನ್ 13ಎಸೆತ,) ಮತ್ತು ಪ್ರಭಸಿಮ್ರನ್ ಸಿಂಗ್ (42ರನ್ 23 ಎಸೆತ) ಅವರು ಮೊದಲ ವಿಕೆಟ್ಗೆ ಬಿರುಸಿನ 66 ರನ್ 24 ಎಸೆತದಲ್ಲಿ ಸೇರಿಸಿದ್ದರು.
ಸನ್ ರೈಸರ್ಸ್ನ ಯಶಸ್ವಿ ಬೌಲರ್ ಹರ್ಷಲ್ ಪಟೇಲ್ (42ಕ್ಕೆ4) ಅವರು ಪ್ರಿಯಾಂಶ್ ಆರ್ಯ ವಿಕೆಟ್ ಪಡೆದು ಜೊತೆಯಾಟ ಮುರಿದರು. ಇನ್ನೊಂದೆಡೆ ಅಯ್ಯರ್ ರನ್ ವೇಗ ಹೆಚ್ಚುವಂತೆ ನೋಡಿಕೊಂಡರು. ಹೀಗಾಗಿ ಪವರ್ಪ್ಲೇನಲ್ಲಿ ಪಂಜಾಬ್ ತಂಡ 1 ವಿಕೆಟ್ಗೆ 89 ರನ್ ಗಳಿಸಿತು.







