Categories
ಕ್ರಿಕೆಟ್ ಕ್ರೀಡಾ ಸುದ್ದಿ

ನಮ್ಮೂರ್ ಎಕ್ಸ್‌ಪ್ರೆಸ್ ಸ್ಪೋರ್ಟ್ಸ್ ನ್ಯೂಸ್

ನಮ್ಮೂರ್ ಎಕ್ಸ್‌ಪ್ರೆಸ್ ಸ್ಪೋರ್ಟ್ಸ್ ನ್ಯೂಸ್

ಐಪಿಎಲ್ -2025
* ಡೆಲ್ಲಿ ಮತ್ತು ರಾಜಸ್ಥಾನ್ ಪಂದ್ಯ ಟೈ – ಸೂಪರ್ ಓವರ್‌ನಲ್ಲಿ ಗೆದ್ದ ಡೆಲ್ಲಿ
* ಗಾಯದಿಂದ ಅರ್ಧಕ್ಕೆ ತೆರಳಿದ ಸಂಜು ಸ್ಯಾಮ್ಸನ್

NAMMMUR EXPRESS SPORTS NEWS
ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಟೈ ಆಗಿದ್ದು, ನಂತರ ನಡೆದ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತು. ಆರಂಭಿಕ ಆಟಗಾರ ಜೇಕ್ ಫ್ರೇಸರ್ ಮೆಕ್​ಗುರ್ಕ್ 9 ರನ್ ಗಳಿಸಿದಾಗ ಜೈಸ್ವಾಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ಅಭಿಷೇಕ್ ಪೊರೆಲ್ 1 ಸಿಕ್ಸರ್, 5 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 49 ರನ್ ಗಳಿಸಿದಾಗ ಹಸರಂಗ ಬೌಲಿಂಗ್‌ನಲ್ಲಿ ಕ್ಯಾಚ್ ನೀಡುವ ಮೂಲಕ ಅರ್ಧ ಶತಕದಿಂದ ವಂಚಿತರಾದರು. ಕರುಣ್ ನಾಯರ್ ಶೂನ್ಯಕ್ಕೆ ರನ್ ಔಟಾದರೆ,ನಂತರ ಬಂದ ಕೆಎಲ್ ರಾಹಲ್ ಎರಡು ಸಿಕ್ಸರ್,ಎರಡು ಬೌಂಡರಿಗಳೊಂದಿಗೆ 32 ಎಸೆತಗಳಲ್ಲಿ 38 ಮತ್ತು ನಾಯಕ ಅಕ್ಸರ್ ಪಟೇಲ್ 34 ರನ್ ಗಳಿಸಿದರು. ನಂತರ ತ್ರಿಸ್ಟನ್ ಸ್ಟುಬ್ಸ್ ಹಾಗೂ ಅಶುತೋಷ್ ಶರ್ಮಾ ಔಟಾಗದೆ ಕ್ರಮವಾಗಿ 34 ಮತ್ತು 15 ರನ್ ಗಳಿಸುವುದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಸೇರಿಸಿತು. ರಾಜಸ್ಥಾನ ರಾಯಲ್ಸ್ ಪರ ಜೋಪ್ರಾ ಅರ್ಚರ್ 2 ವಿಕೆಟ್ ಪಡೆದರೆ, ಮಹೀಶ್ ತೀಕ್ಷ್ಣ ಮತ್ತು ವನಿದು ಹಸರಂಗ ತಲಾ ಒಂದೊಂದು ವಿಕೆಟ್ ಕಿತ್ತರು.
ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 189 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ಸಿಕ್ಸರ್, 3 ಬೌಂಡರಿಗಳೊಂದಿಗೆ 37 ಎಸೆತಗಳಲ್ಲಿ 51 ರನ್ ಮಾಡಿ ಕುಲದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್ 31 ರನ್‌ಗಳಿಸಿದಾಗ ಗಾಯಗೊಂಡು ಅರ್ಧಕ್ಕೆ ಪಂದ್ಯದಿಂದ ರಿಟೈರ್ಡ್ ಹರ್ಟ್ ತೆಗೆದುಕೊಂಡರು. ಬಳಿಕ ಬಂದ ರಿಯಾನ್ ಪರಾಗ್ 8, ನಿತೀಶ್ ರಾಣಾ 51, ಧ್ರುವ ಜುರೆಲ್ 26 ಮತ್ತು ಶಿಮ್ರಾನ್ ಹೆಟ್ಮೆಯರ್ ಔಟಾಗದೇ 15 ರನ್ ಗಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 188 ರನ್‌ಗಳಿಸಿ ಪಂದ್ಯ ಟೈ ಆಯಿತು.ನಂತರ ನಡೆದ ಸೂಪರ್ ಓವರ್‌ನಲ್ಲಿ ರಾಜಸ್ಥಾನ್ 11ರನ್‌ಗಳಿಸಿ 2 ವಿಕೆಟ್ ಕಳೆದುಕೊಂಡಿತು, ಡೆಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 13 ರನ್‌ಗಳಿಸಿ ಗೆಲುವು ಸಾಧಿಸಿತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.