ನಮ್ಮೂರ್ ಎಕ್ಸ್ಪ್ರೆಸ್ ಸ್ಪೋರ್ಟ್ಸ್ ನ್ಯೂಸ್
ಐಪಿಎಲ್ -2025
* ಮುಂಬೈ ಹರಿಸಿದ ರನ್ ಮಳೆಯಲ್ಲಿ ಕೊಚ್ಚಿಹೋದ ರಾಜಸ್ಥಾನ್
* ಸತತ 6 ಜಯದೊಂದಿಗೆ ಮುಂಬೈ ಪಾಯಿಂಟ್ ಟೇಬಲ್ ಟಾಪರ್, ಪ್ಲೇ ಆಫ್ನಿಂದ ರಾಜಸ್ಥಾನ ಹೊರಕ್ಕೆ
NAMMMUR EXPRESS SPORTS NEWS
ಜೈಪುರ:ರಯಾನ್ ರಿಕೆಲ್ಟನ್, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ನಾಯಕ ಹಾರ್ದಿಕ್ ಪಾಂಡ್ಯ ಅವರ ರನ್ ಮಳೆಯ ಆಟದಿಂದ ರಾಜಸ್ಥಾನ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 100 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಕೇವಲ 2 ವಿಕೆಟ್ ನಷ್ಟಕ್ಕೆ 217 ರನ್ ಕಲೆಹಾಕಿತು. ಕಠಿಣ ಗುರಿನ್ನು ಬೆನ್ನಟ್ಟಿದ ರಾಜಸ್ಥಾನ 16.1 ಓವರ್ಗಳಲ್ಲಿ 117 ರನ್ ಗಳಿಸಿ ಆಲೌಟ್ ಆಯಿತು. ಸತತ 6 ಜಯದೊಂದಿಗೆ ಉತ್ತಮ ರನ್ ರೇಟ್ ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಏರಿದೆ, ಅಷ್ಟೇ ಅಂಕ ಪಡೆದಿರುವ ಆರ್ಸಿಬಿ ಎರಡನೇ ಸ್ಥಾನಕ್ಕೆ ಜಾರಿದೆ.
ರಾಜಸ್ಥಾನ್ ತಂಡವು ಆರಂಭಿಕ ಹಂತದಲ್ಲೇ ಆಘಾತ ಅನುಭವಿಸಿತು. ಗುಜರಾತ್ ವಿರುದ್ಧ ಆಡಿದ ಪಂದ್ಯದಲ್ಲಿ ಆರಂಭಿಕರಾದ ಯಶಸ್ವಿ ಜೆಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದೇ ಆಟದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಈ ಜೋಡಿ ನಿರಾಸೆ ಮೂಡಿಸಿತು. ಮೊದಲೇ ಓವರ್ನಲ್ಲೇ ದೀಪಕ್ ಚಹರ್ ಬೌಲಿಂಗ್ ದಾಳಿಗೆ ವೈಭವ್ ಸೂರ್ಯವಂಶಿ ಓಟಾಗಿ, ಪೆವಿಯನ್ನತ್ತ ಮುಖ ಮಾಡಿದರು. ಯಶಸ್ವಿ ಜೈಸ್ವಾಲ್ ಕೂಡಾ ಹೆಚ್ಚು ಹೊತ್ತು ಕ್ರೀಸ್ನಲ್ಲಿರದೇ ಬೋಲ್ಟ್ಗೆ ಕ್ಲೀನ್ ಬೋಲ್ಡ್ ಆದರು. ಅದಾಗಲೇ ರಾಜಸ್ಥಾನ ತಂಡ 2 ಓವರ್ಗೆ 18 ರನ್ನಷ್ಟಕ್ಕೆ 2 ವಿಕೆಟ್ ಕಳೆದುಕೊಂಡಿತ್ತು.
ಬಳಿಕ ಬಂದ ನಿತೀಶ್ ರಾಣಾ ಕೂಡ 11 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಯಾರು ಕೂಡ ಉತ್ತಮ ಪ್ರದರ್ಶನ ನೀಡಲಿಲ್ಲ. 8 ಎಸೆತಗಳಲ್ಲಿ 16 ರನ್ ಬಾರಿಸಿದ್ದ ತಂಡದ ನಾಯಕ ರಿಯಾನ್ ಪರಾಗ್ರನ್ನು ಜಸ್ಪ್ರೀತ್ ಬುಮ್ರಾ ಪೆವಿಲಿಯನ್ಗೆ ಕಳುಹಿಸಿದರು. ಬಳಿಕ ಬಂದ ಜುರೇಲ್ 11 ಎಸೆತಕ್ಕೆ 11ರನ್ ಕಲೆಹಾಕಿದರೆ, ಹೆಟ್ಮೆಯರ್ ಶೂನ್ಯಕ್ಕೆ ಔಟಾದರು.
ಅಷ್ಟರಲ್ಲಾಗಲೇ 4 ಓವರ್ನಲ್ಲೇ ರಾಜಸ್ಥಾನ ತಂಡವು 5 ವಿಕೆಟ್ ಕಳೆದುಕೊಂಡಿತ್ತು. ಬಳಿಕ ಕ್ರೀಸ್ಗೆ ಬಂದ ಜೋಫ್ರಾ ಆರ್ಚರ್ 27 ಎಸೆತಗಳಲ್ಲಿ 30 ರನ್ ಬಾರಿಸಿ, ಮುಂಬೈ ಬೌಲರ್ಸ್ಗಳ ದಾಳಿಗೆ ಬಲಿಯಾದರು. ಬಳಿಕ ಬಂದ ಮಹೀಶ್ ತೀಕ್ಷಣ ಹಾಗೂ ಕುಮಾರ್ ಕಾರ್ತಿಕೇಯ ಒಂದಕ್ಕಿಗೆ ಮುಂಬೈ ಬೌಲರ್ಸ್ಗೆ ಶರಣಾದರು. ಮುಂಬೈ ಬೌಲರ್ಸ್ಗಳ ದಾಳಿಗೆ ರಾಜಸ್ಥನ ಧೂಳಿಪಟವಾಯ್ತು.
ಮುಂಬೈ ಪರ ಬೋಲ್ಟ್ ಹಾಗೂ ಕರಣ್ ಶರ್ಮಾ ತಲಾ 3 ವಿಕೆಟ್ ಪಡೆದರು. ಬುಮ್ರಾ 2 ವಿಕೆಟ್, ದೀಪಕ್ ಚಹರ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದರು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ ಭರ್ಜರಿ ಜೊತೆಯಾಟವಾಡಿ ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆರ್ಆರ್ ತಂಡದ ಬೌಲರ್ಗಳು ವಿಫಲರಾದರು.ಪವರ್ ಪ್ಲೇನಲ್ಲಿ ಇವರಿಬ್ಬರ ಜೊತೆಯಾಟವು ಸ್ಟೇಡಿಯಂನಲ್ಲಿ ಫ್ಯಾನ್ಸ್ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಮುಂಬೈ ಇಂಡಿಯನ್ಸ್ ಮೊದಲ 6 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 58 ರನ್ ಸಿಡಿಸಿತು.ರಯಾನ್ ರಿಕಲ್ಟನ್ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರಿಸಿದ್ದು, 9ನೇ ಓವರ್ನಲ್ಲಿ ಕುಮಾರ್ ಕಾರ್ತಿಕೇಯ ಎಸೆದ ಐದನೇ ಎಸೆತಕ್ಕೆ ಸಿಕ್ಸರ್ ಬಾರಿಸುವ ಮೂಲಕ, 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. 71 ಎಸೆತಗಳಲ್ಲಿ 116 ರನ್ ಕಲೆ ಹಾಕಿದ ರೋಹಿತ್ ಹಾಗೂ ರಯಾನ್ ಜೊಡಿಯ ಓಟಕ್ಕೆ 11 ನೇ ಓವರ್ನಲ್ಲಿ ಮಹೀಶ್ ತೀಕ್ಷಣ್ ಬ್ರೇಕ್ ಹಾಕಿದರು. ರಯಾನ್ ರಿಕಲ್ಟನ್ 38 ಎಸೆತಗಳಲ್ಲಿ 61 ರನ್ (7 ಬೌಂಡರಿ, 3 ಸಿಕ್ಸರ್) ಸಿಡಿಸಿ ಓಟಾದರು.
ರಯಾನ್ ರಿಕಲ್ಟನ್ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರೆಸಿ, 9ನೇ ಓವರ್ನಲ್ಲಿ ಕುಮಾರ್ ಕಾರ್ತಿಕೇಯ ಎಸೆದ ಐದನೇ ಎಸೆತಕ್ಕೆ ಸಿಕ್ಸರ್ ಬಾರಿಸುವ ಮೂಲಕ, 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. 71 ಎಸೆತಗಳಲ್ಲಿ 116 ರನ್ ಕಲೆ ಹಾಕಿದ ರೋಹಿತ್ ಹಾಗೂ ರಯಾನ್ ಜೊಡಿಯ ಓಟಕ್ಕೆ 11 ನೇ ಓವರ್ನಲ್ಲಿ ಮಹೀಶ್ ತೀಕ್ಷಣ್ ಬ್ರೇಕ್ ಹಾಕಿದರು. ರಯಾನ್ ರಿಕಲ್ಟನ್ 38 ಎಸೆತಗಳಲ್ಲಿ 61 ರನ್ (7 ಬೌಂಡರಿ, 3 ಸಿಕ್ಸರ್) ಸಿಡಿಸಿ ಔಟಾದರು.
ಉತ್ತಮ ಫಾರ್ಮ್ನಲ್ಲಿದ್ದ ರೋಹಿತ್ ಶರ್ಮಾ ಮತ್ತೊಮ್ಮೆ ಅರ್ಧಶತಕ ಬಾರಿಸಿ ಮಿಂಚಿದರು. ಇವರು 36 ಎಸೆತಗಳಲ್ಲಿ 53 ರನ್ (9 ಬೌಂಡರಿ) ಬಾರಿಸಿ 12ನೇ ಓವರ್ನ 4ನೇ ಎಸೆತದಲ್ಲಿ ರಿಯಾನ್ ಪರಾಗ್ಗೆ ವಿಕಟ್ ಒಪ್ಪಿಸಿದರು. ಅದಾಗಲೇ ಮುಂಬೈ ತಂಡ 2 ವಿಕೆಟ್ ನಷ್ಟಕ್ಕೆ 123 ರನ್ ಕಲೆ ಹಾಕಿತ್ತು.
ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಕ್ರೀಸ್ಗೆ ಬಂದ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ತಮ್ಮ ಪವರ್ ಫುಲ್ ಹೊಡೆತಗಳಿಂದ ಎದುರಾಳಿ ಬೌಲರ್ಗಳನ್ನು ಬೆಂಡೆತ್ತಿತು. ಈ ಜೋಡಿ ಕಟ್ಟಿ ಹಾಕುವುದು ರಾಜಸ್ಥಾನ ತಂಡಕ್ಕೆ ದೊಡ್ಡ ಸವಾಲಾಯಿತು.
ಫಜಲ್ ಫರೂಕಿ ಅವರ 18ನೇ ಓವರ್ ಒಂದರಲ್ಲೇ 21 ರನ್ಗಳು ಹರಿದು ಬಂದಿದೆ. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 48 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ಸೇರಿದಂತೆ ಅಜೇಯ 48 ರನ್ ಕಲೆ ಹಾಕಿದರು. ಮುಂಬೈ ಇಂಡಿಯನ್ಸ್ ತಂಡ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 217 ರನ್ ಕಲೆಹಾಕಿತ್ತು. ರಾಜಸ್ಥಾನ್ ಬೌಲರ್ಸ್ಗಳಾದ ಮಹೀಶ್ ತೀಕ್ಷಣ್, ರಿಯಾನ್ ಪರಾಗ್ ತಲಾ ಒಂದು ವಿಕೆಟ್ ಕಬಳಿಸಿದರು.
* ಪಿಂಕ್ ಜೆರ್ಸಿ ಧರಿಸಿದ್ದ ರಾಜಸ್ಥಾನ್ ರಾಯಲ್ಸ್
ವಿಶೇಷವಾಗಿ ಗ್ರಾಮೀಣ ಮಹಿಳೆಯರ ಉನ್ನತಿಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಈ ಕ್ರಮ ಕೈಗೊಂಡಿದೆ. ಮಹಿಳಾ ಸಬಲೀಕರಣದ ಕಡೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಲು ಫ್ರಾಂಚೈಸಿ ಈ ಕ್ರಮ ತೆಗೆದುಕೊಂಡಿದೆ. ಮುಂಬೈ ವಿರುದ್ಧದ ಪಂದ್ಯಕ್ಕೆ ರಾಜಸ್ಥಾನ ತಂಡದ ಆಟಗಾರರು ಗುಲಾಬಿ ಬಣ್ಣದ ಜೆರ್ಸಿಗಳನ್ನು ಧರಿಸಿ ಮೈದಾನಕ್ಕೆ ಪ್ರವೇಶಿಸಿದರು.








