ಸ್ಪೋರ್ಟ್ಸ್ ಟಾಪ್ ನ್ಯೂಸ್..!!
* ಭಾರತೀಯ ಕುಸ್ತಿ ಫೆಡರೇಷನ್ ಮೇಲಿನ ಅಮಾನತು ತೆರವು
* ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಜಲಕಂಟಕ
* ಕೊಹ್ಲಿ,ರೋಹಿತ್ 4 ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಕ್ರಿಕೆಟಿಗರು
NAMMUR EXPRESS SPORTS NEWS
* ಭಾರತೀಯ ಕುಸ್ತಿ ಫೆಡರೇಷನ್ ಮೇಲಿನ ಅಮಾನತು ತೆರವು..
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಮೇಲೆ ವಿಧಿಸಲಾಗಿದ್ದ ಅಮಾನತು ಆದೇಶವನ್ನು ಕ್ರೀಡಾ ಸಚಿವಾಲಯ ರದ್ದುಗೊಳಿಸಿದೆ.
ಮುಂದಿನ ಸೂಚನೆ ಬರುವವರೆಗೆ ಒಕ್ಕೂಟದ ದೈನಂದಿನ ಕಾರ್ಯಾಚರಣೆಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಯಿಂದ ದೂರವಿರಲು ಹೊಸದಾಗಿ ಆಯ್ಕೆಯಾದ ಕಾರ್ಯಕಾರಿ ಸಮಿತಿಗೆ ಸೂಚನೆ నిడిది.
ಕ್ರೀಡೆ ಮತ್ತು ಕ್ರೀಡಾಪಟುಗಳ ಹಿತದೃಷ್ಟಿಯಿಂದ ಸಚಿವಾಲಯವು ಅಮಾನತು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಸಚಿವಾಲಯ ತನ್ನ ಆದೇಶದಲ್ಲಿ ತಿಳಿಸಿದೆ.
ಈ ಕ್ರಮ ಕೈಗೊಂಡಿದ್ದಕ್ಕಾಗಿ ನಾನು ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಇದು ನಮಗೆ ಸುಗಮವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಕ್ರೀಡೆಯ ಹಿತದೃಷ್ಟಿಯಿಂದ ಇದು ಅಗತ್ಯವಾಗಿತ್ತು. ಸ್ಪರ್ಧೆಗಳ ಕೊರತೆಯಿಂದ ಕ್ರೀಡಾಪಟುಗಳು ಬಳಲುತ್ತಿದ್ದರು ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.
ಅಮನ್ನಲ್ಲಿ ನಡೆಯಲಿರುವ ಏಷ್ಯನ್ ಚಾಂಪಿಯನ್ಶಿಪ್ಗೆ ಆಯ್ಕೆ ಟ್ರಯಲ್ಸ್ ಸೇರಿದಂತೆ ಚಟುವಟಿಕೆಗಳನ್ನು ಪುನರಾರಂಭಿಸಲು ಈ ಆದೇಶ ದಾರಿ ಮಾಡಿಕೊಟ್ಟಿದೆ. ಡಿಸೆಂಬರ್ 21 ರಂದು ಆಯ್ಕೆಯಾದ ಹೊಸ ಸಂಸ್ಥೆಯ ಆಡಳಿತ ಮತ್ತು ಕಾರ್ಯವಿಧಾನದ ಸಮಗ್ರತೆಯಲ್ಲಿನ ಲೋಪಗಳಿಗಾಗಿ ಸಚಿವಾಲಯವು 2023 ರ ಡಿ.24 ರಂದು WFI ಅನ್ನು ಅಮಾನತುಗೊಳಿಸಿತ್ತು.
* ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಜಲಕಂಟಕ – ಕುಡಿಯುವ ನೀರು ಗ್ರೌಂಡ್ಗೆ ನಿಷೇಧ
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಜಲ ಕಂಟಕ ಎದುರಾಗಿದೆ. ಬೇಸಿಗೆ ಆರಂಭವಾಗುತ್ತಿದಂತೆ ಜಲಮಂಡಳಿ ಅಲರ್ಟ್ ಆಗಿದೆ. ಕುಡಿಯುವ ನೀರನ್ನು ಗೌಂಡ್ಗೆ ಬಳಸೋದಕ್ಕೆ ನಿಷೇಧ ಮಾಡಲಾಗಿದೆ. ಈಗಾಗಲೇ ಜಲಮಂಡಳಿ ಆಯೋಜಕರಿಗೆ ಸೂಚನೆ ಕೂಡ ನೀಡಿದರೆ.
ಮಾರ್ಚ್ 22ರಂದು ಶುರುವಾಗಲಿರುವ 2025ರ ಐಪಿಎಲ್, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ನಡಯುವಾಗ ಗೌಂಡ್ಗೆ ಕುಡಿಯುವ ನೀರು ಬಳಸದಂತೆ ಸೂಚನೆ ನೀಡಲಾಗಿದೆ. ಪ್ರತಿ ಪಂದ್ಯದ ಸಂದರ್ಭದಲ್ಲಿ ಕ್ರೀಡಾಂಗಣಕ್ಕೆ ನೀರುಣಿಸಲು 75 ಸಾವಿರ ಲೀಟರ್ ನೀರು ಬೇಕು. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೇಡಿಕೆ ಬೇಸಿಗೆಯಲ್ಲಿ ಹೆಚ್ಚಿರಲಿದೆ. ನಗರದಲ್ಲಿ ಅಂತರ್ಜಲ ಮಟ್ಟ ಕುಸಿದಿರುವ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದ್ದು, ಐಪಿಎಲ್ ಪಂದ್ಯದ ವೇಳೆ ಕುಡಿಯುವ ನೀರನ್ನು ಬಳಸದಂತೆ ಆಯೋಜಿಕರಿಗೆ ಸೂಚಿಸಿದ್ದಾರೆ. ಕಬ್ಬನ್ ಉದ್ಯಾನವನದ ತ್ಯಾಜ್ಯ ನೀರನ್ನು ಸಂಸ್ಕರಣ ಘಟಕದಿಂದ ಕ್ರೀಡಾಂಗಣಕ್ಕೆ ಸರಬರಾಜು ಮಾಡಲು ಜಲಮಂಡಳಿ ಅನುಮತಿ ನೀಡಿದೆ.
* ಕೊಹ್ಲಿ,ರೋಹಿತ್ 4 ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಕ್ರಿಕೆಟಿಗರು..
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಪ್ರಸ್ತುತ ನಾಯಕ ರೋಹಿತ್ ಶರ್ಮಾ ನಾಲ್ಕು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಕ್ರಿಕೆಟಿಗರು.
ಕೊಹ್ಲಿ 2011ರ ಏಕದಿನ ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2024ರ ಟಿ 20 ವಿಶ್ವಕಪ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದಾರೆ. ಇನ್ನು ರೋಹಿತ್ 2007ರ ಟಿ20 ವಿಶ್ವಕಪ್, 2013ರ ಚಾಂಪಿಯನ್ಸ್ ಟ್ರೋಫಿ, 2024ರ ಟಿ 20 ವಿಶ್ವಕಪ್ ಮತ್ತು 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದಾರೆ.








