Categories
ಶೃಂಗೇರಿ

ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ

ಮಲೆನಾಡ ಹಿರಿಯ ನಾಯಕ ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ
– ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರಿಗೆ ಪಿತೃ ವಿಯೋಗ
– ಹೃದಯ ಸಂಬಂಧಿ ಖಾಯಿಲೆಯಿಂದ ನಿಧನ: ಗಣ್ಯರ ಸಂತಾಪ

NAMMUR EXPRESS NEWS
ಶೃಂಗೇರಿ: ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಲ್ಲಿ ಗುರುವಾರ ನಿಧನರಾಗಿದ್ದಾರೆ.
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ತಂದೆಯವರಾದ ಬೇಗಾನೆ ರಾಮಯ್ಯ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ ಸುಮಾರು 1:45ಕ್ಕೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಲೆನಾಡ ಹಿರಿಯ ನಾಯಕರು ಆಗಿದ್ದ ಅವರು 1978ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬೇಗಾನೆ ರಾಮಯ್ಯ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಗ್ರಾಮೀಣ ನೀರು ಪೂರೈಕೆ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮಯ್ಯ, 1972 ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದರು.
ಬೇಗಾನೆ ರಾಮಯ್ಯ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶುಮಂತ್, ಶಾಸಕರಾದ ರಾಜೇಗೌಡ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರಲ್ಲಿ ಅಂತಿಮ ದರ್ಶನ, ಏ. 25ಕ್ಕೆ ಹೊಸಹಳ್ಳಿಯಲ್ಲಿ ಅಂತ್ಯ ಸಂಸ್ಕಾರ

ಬೇಗಾನೆ ರಾಮಯ್ಯ ಮಾಜಿ ಸಚಿವರು, ಕರ್ನಾಟಕ ಸರ್ಕಾರ ಇವರು ಇಂದು ಮಧ್ಯಾಹ್ನ ದೈವಾದೀನರಾದರೆಂದು ತಿಳಿಸಲು ವಿಷಾದನೀಯವೆನಿಸಿದೆ. ಶ್ರೀಯುತರ ಅಂತ್ಯ ಸಂಸ್ಕಾರವನ್ನು ದಿನಾಂಕ:25.04.2025 ರಂದು ಸಂಜೆ: 03:00 ಗಂಟೆಗೆ ಸೀತಾ ಫಾರಂ, ಹೊಸಹಳ್ಳಿ ಮಂಡಗದ್ದೆ ರಸ್ತೆ, ಶಿವಮೊಗ್ಗ, ಜಿಲ್ಲೆಯಲ್ಲಿ ನೆರವೇರಿಸಲು ಕುಟುಂಬದವರು ನಿಶ್ಚಯಸಿರುತ್ತಾರೆ.
ಸಾರ್ವಜನಿಕರಿಗೆ ಅಂತಿಮ ದರ್ಶನವನ್ನು ಈ ದಿನ ಸಂಜೆ 05:30 ಗಂಟೆಯವರೆಗೆ (Aster CMI Hospital) ಕೊಡಿಗೆಹಳ್ಳಿ ಗೇಟ್, ಬಳ್ಳಾರಿ ರಸ್ತೆ, ಬೆಂಗಳೂರು ಇಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.