ಸುಧಾಕರ್ ಶೆಟ್ಟಿಗೆ ರಾಷ್ಟ್ರ ಮಟ್ಟದಲ್ಲಿ ಹುದ್ದೆ!
– ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ
– ದೇವೇಗೌಡ, ಕುಮಾರಸ್ವಾಮಿ ಅವರಿಗೆ ಅಭಿನಂದನೆ
ಶೃಂಗೇರಿ: ಜಾತ್ಯಾತೀತ ಜನತಾ ದಳದ ಹಿರಿಯ ಉಪಾಧ್ಯಕ್ಷರು ಹಾಗೂ ಎಚ್.ಡಿ.ದೇವೇಗೌಡ ಅವರ ಕುಟುಂಬಕ್ಕೆ ಅತ್ಯಂತ ಆತ್ಮೀಯರಾದ ಶೃಂಗೇರಿ ಕ್ಷೇತ್ರದ ನಾಯಕರು ಆದ ಸುಧಾಕರ್ ಎಸ್ ಶೆಟ್ಟಿ ಅವರನ್ನು ಜಾತ್ಯಾತೀತ ಜನತಾ ದಳದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
ಶೃಂಗೇರಿ ಕ್ಷೇತ್ರದ ಜನರ ಅವಿರತ ಸೇವೆಗೆ ದೊರೆತ ಮನ್ನಣೆ. ಜನ ಸೇವೆ ಜತೆಗೆ ಜೆಡಿಎಸ್ ಪಕ್ಷದ ಸೇವೆಗೆ ನಾನು ಸದಾ ಸಿದ್ಧ. ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಸುಧಾಕರ್ ಎಸ್ ಶೆಟ್ಟಿ ಅವರು ತಮ್ಮ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ನೇಮಕವಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಸುಧಾಕರ್ ಶೆಟ್ಟಿಯವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.








