- ಮಾ. 21ರಿಂದ ಕೆಎಸ್ ಆರ್ ಟಿಸಿ ನೌಕರರ ಮುಷ್ಕರ
NAMMUR EXPRESS NEWS
ಬೆಂಗಳೂರು: ಯುಗಾದಿ ಹಬ್ಬಕ್ಕೆಂದು ನಗರಗಳಿಂದ ತಮ್ಮ ತಮ್ಮ ಊರುಗಳಿಗೆ ತೆರೆಳುವ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಕಾದಿದ್ದು ಮಾರ್ಚ್ 21 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ ಆರ್ ಟಿಸಿ ನೌಕರರು ಮುಷ್ಕರ ಹೂಡಿದ್ದಾರೆ.
ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಹಾಗೂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ಮಾರ್ಚ್ 21 ರಿಂದು ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರು ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿರುವ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್, ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದವು. ಆದರೆ ಸರ್ಕಾರ ನೌಕರರ ಮನವಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ. ಶ್ರೀರಾಮುಲು ನಮ್ಮಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಈ ಹಿಂದೆ ನಡೆದ ಹಲವು ಸಭೆಗಳಲ್ಲಿ ಹೇಳಿದ್ದರು. ಆದರೆ ಇನ್ನುವರೆಗೂ ನಮ್ಮಬೇಡಿಕೆಗಳನ್ನು ಈಡೇರಿಸಿಲ್ಲ. ಇತ್ತೀಚಿಗೆ ಸರ್ಕಾರಿ ನೌಕರರು, ವೇತನ ಹೆಚ್ಚಳ ಸಂಬಂಧ ಪ್ರತಿಭಟನೆ ಮಾಡಿದ ವೇಳೆ ಸಿಎಂ ಬೊಮ್ಮಾಯಿ ಶೇ 17 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದರು. ಆದರೆ ನಾವು ಇಷ್ಟು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಗಮನ ಹರಿಸುತ್ತಿಲ್ಲ. ಹೀಗಾಗಿ ಮಾರ್ಚ್ 21 ರಂದು ಮುಷ್ಕರ ನಡೆಸಲಿದ್ದು ಅಂದು ಬೆಳಿಗ್ಗೆ 6 ಗಂಟೆಯಿಂದ ಬಸ್ ಸಂಚಾರ ಸ್ಥಗಿತಗೊಳಿಸುತ್ತೇವೆ. ಡಿಪೋದಿಂದ ಬಸ್ ಗಳನ್ನ ತೆಗೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ 23,000 ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಹೇಳಿದೆ. ಇದರಿಂದ ಮಾರ್ಚ್ 22 ರಂದು ಯುಗಾದಿ ಹಬ್ಬಕ್ಕೆಂದು ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗಲಿದೆ.
ಸಾರಿಗೆ ನೌಕರರ ಬೇಡಿಕೆಗಳಿವು…?
- ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತಕ್ಕೆ ಶೇ. 25 ರಷ್ಟು ಹೆಚ್ಚಿಸಬೇಕು
- ವೇತನ ಹೆಚ್ಚಳವೂ ಪರಿಷ್ಕೃತ ಮೂಲ ವೇತನದ ಶೇ.3 ರಷ್ಟಿರಬೇಕು.
- ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಮೇಲಿನಂತೆಯೇ ಸಿದ್ಧಪಡಿಸಬೇಕು
- ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.
- ಎಲ್ಲ ನೌಕರರಿಗೂ ಹಾಲಿ ಇರುವ ಬಾಟಾ ಮಾಸಿಕ, ದೈನಂದಿನ (ಕ್ಯಾಷ್,ರಿಪಾಸ್ಟ್, ಬಟ್ಟೆ ತೊಳೆಯುವ, ರಾತ್ರಿ ಪಾಳಿ ಪ್ರೋತ್ಸಾಹ ಭತ್ಯೆ ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.
- ಹೊಲಿಗೆ ಭತ್ಯ ಶೂ, ಜೆರ್ಸಿ, ರೈನ್ ಕೋಟೆ ನೀಡುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು.
- ಎಲ್ಲ ನಿರ್ವಾಹಕರಿಗೂ ಕ್ಯಾಪಿಯರ್ಗಳಿಗೆ ಸಮಾನದ ನಗದು ಪ್ರೋತ್ಸಾಹಧನ ನೀಡಬೇಕು.
- 2021ರ ಏಪ್ರಿಲ್ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸವೆಯಿಂದ ವಜಾಗೊಳಿಸಿದ ನೌಕರರನ್ನು ಷರತ್ತಿಲ್ಲದೆ ಮರು ನೇಮಕ ಮಾಡಬೇಕು.
- ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು.
- ಮುಷ್ಕರದ ವೇಳೆ ಎಫ್ಐಆರ್ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್ ತೆಗೆದುಕೊಳ್ಳಬೇಕು.
- ಜಂಟಿ ಕ್ರಿಯಾ ಸಮಿತಿಯಿಂದ ಸಲ್ಲಿಸಿರುವ ಬೆಡಿಕೆಗಳನ್ನು ಆಡಳಿತ ವರ್ಗದವರು ಚರ್ಚಿಸಿ, ವಿಳಂಬವಿಲ್ಲದೆ ಈಡೇರಿಸಬೇಕು.