ಮತ್ತೆ ಅಡಿಕೆ ಬೆಲೆ ಕುಸಿತ?!
– 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ
– ಮತ್ತೆ ಶುರುವಾಗಿದೆ ಭೂತಾನ್ ಅಡಿಕೆ ಭೂತ!
NAMMUR EXPRESS NEWS
ನವದೆಹಲಿ: ಭೂತಾನ್ ನಿಂದ ಕನಿಷ್ಠ ಬೆಲೆ ನಿಯಮಗಳಿಲ್ಲದೆ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗುತ್ತದೆ.
2022 ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ ಕನಿಷ್ಠ ಆಮದು ಬೆಲೆ ಇಲ್ಲದೆ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಯಿತು.
ಕೇಂದ್ರ ಸರ್ಕಾರ 2017ರಲ್ಲಿ ಪ್ರತಿ ಕೆಜಿ ಅಡಿಕೆಗೆ 251 ರೂ. ಕನಿಷ್ಠ ಆಮದು ಬೆಲೆ ನಿಗದಿಪಡಿಸಿದ್ದು, ಕಳೆದ ವರ್ಷ ಈ ದರವನ್ನು ಕೆಜಿಗೆ 351 ರೂಪಾಯಿಗೆ ನಿಗದಿಪಡಿಸಲಾಗಿದೆ. ದೇಶದ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿಕೊಂಡರೂ ಈ ಬೆಲೆಗಿಂತ ಕಡಿಮೆ ದರಕ್ಕೆ ಆಮದು ಮಾಡಿಕೊಳ್ಳಬಾರದು ಎಂದು ಹೇಳಲಾಗಿದೆ.
ಭೂತಾನ್ ನಿಂದ ಆಮದು ಮಾಡಿಕೊಳ್ಳುವ ಅಡಿಕೆ ಪ್ರಮಾ ದೇಶದ ಅಡಿಕೆಯ ಮೇಲೆ ಾವುದೇ ಪರಿಣಾಮ ಬೀರುವುದಿಲ್ಲ.
ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆದು ರೈತರಿಗೆ ತಕ್ಕ ನ್ಯಾಯಯುತ ಬೆಲೆ ಕೊಡಿಸಬೇಕೆಂಬುದು ರೈತರ ಒತ್ತಾಯವಾಗಿದೆ. ಕಳೆದ ವರ್ಷ ಭೂತಾನ್ ಅಡಿಕೆ ಭಾರತಕ್ಕೆ ಬಂದಾಗ ಕ್ವಿಂಟಾಲ್ ಅಡಿಕೆ ದರ 4 ಸಾವಿರ ರೂಪಾಯಿಗಳಿಗೆ ಕುಸಿದಿತ್ತು. ಈಗ ಮತ್ತೆ ದರ ಕುಸಿತದ ಆತಂಕ ಎದುರಾಗಿದೆ.